ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಲ ದಿನಗಳ ಹಿಂದೆ ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಸೇರಿದಂತೆ ಐವರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಈ ಬೆನ್ನಲ್ಲೇ, ಇದೀಗ ಡಿಕೆ ಶಿವಕುಮಾರ್ ಸೇರಿದಂತೆ ಐವರ ವಿರುದ್ಧ ದೆಹಲಿ ಕೋರ್ಟ್, ಸಮನ್ಸ್ ಜಾರಿಗೊಳಿಸಿದೆ.
ದೆಹಲಿಯ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿಗೊಳಿಸಿದ್ದು, ಜುಲೈ 1ರಂದು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಚಿನ್ ನಾರಾಯಣ್, ಸುನೀಲ್ ಶರ್ಮಾ, ಆಂಜನೇಯ ಹನುಮಂತಯ್ಯ ಹಾಗೂ ರಾಜೇಂದ್ರ ಎಂಬುವರಿಗೆ ಸಮನ್ಸ್ ಜಾರಿಗೊಳಿಸಿದೆ.
ಇನ್ನೂ ಬೇಸಿಗೆ ರಜೆಯ ಬಳಿಕ ಪ್ರಕರಣದ ವಿಚಾರಣೆಯನ್ನು ಕೋರ್ಟ್ ನಡೆಸಲಿದೆ ಎನ್ನಲಾಗಿದೆ. ಬೇಸಿಗೆ ರಜೆಯ ಬಳಿಕ ಪ್ರಕರಣದ ವಿಸ್ತೃತ ವಿಚಾರಣೆ ನಡೆಯೋದಾಗಿ ತಿಳಿದು ಬಂದಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.




