Monday, June 16, 2025

Latest Posts

ಆ‌ರ್.ಸಿ.ಬಿ ಗೆಲುವಿಗಾಗಿ ವಿಶೇಷ ಪೂಜೆ – ಸಿದ್ದಾರೂಢರಿಗೆ ಅಭಿಷೇಕ, ಪೂಜೆ ಸಲ್ಲಿಕೆ..!

- Advertisement -

Hubli News: ಹುಬ್ಬಳ್ಳಿ: ಹದಿನೆಂಟು ವರ್ಷಗಳ ಬಳಿಕ ಆರ್.ಸಿ.ಬಿ ಪೈನಲ್ ಗೆ ಬಂದಿದ್ದು, ಈ ನಿಟ್ಟಿನಲ್ಲಿ ಆರ್.ಸಿ.ಬಿ ಗೆಲುವಿಗಾಗಿ ಅಭಿಮಾನಿಗಳು ಹುಬ್ಬಳ್ಳಿಯ ಸಿದ್ದಾರೂಢರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಇಂದು ಆರ್‌ಸಿಬಿ ಪಂಜಾಬ್ ಫೈನಲ್ ಪಂದ್ಯ ಹಿನ್ನೆಲೆಯಲ್ಲಿ ಆರ್‌ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ ನಡೆಸಿದ್ದು, ಸಿದ್ಧಾರೂಢರಿಗೆ ಅಭಿಷೇಕ ಸಲ್ಲಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು. ಆರ್‌ಸಿಬಿ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು, ಆರ್‌ಸಿಬಿ ಹೆಸರಿನಲ್ಲಿ ವಿಶೇಷ ಅಭಿಷೇಕ ಪೂಜೆ ಸಲ್ಲಿಸಿದರು.

ಇನ್ನೂ ಬ್ಯಾಟ್ ಬಾಲ್‌ಗೆ ವಿಶೇಷ ಪೂಜೆ ಸಲ್ಲಿಸಿ ಅಭಿಮಾನ ಮೆರೆದ ಅಭಿಮಾನಿಗಳು, ಆರ್‌ಸಿಬಿ ಗೆದ್ದು ಬರಲಿ ಎಂದು ವಿಶೇಷ ಪೂಜೆ ಸಲ್ಲಿಕೆ ಮಾಡಿದರು.

Hubli News: ಹುಬ್ಬಳ್ಳಿಯ ಸಾಯಿಬಾಬಾ ಮಂದಿರದಲ್ಲಿ ಆರ್‌ಸಿಬಿ ಪಂಜಾಬ್ ಫೈನಲ್ ಐಪಿಎಲ್ ಮ್ಯಾಚ್ ಹಿನ್ನೆಲೆ, ಆರ್‌ಸಿಬಿ ಗೆಲುವು ಸಾಧಿಸಲಿ ಎಂದು ಪೂಜೆ ಮಾಡಿಸಿದ್ದಾರೆ.

ನಮ್ಮ ಕರ್ನಾಟಕ ಸೇನೆ ವತಿಯಿಂದ ಬ್ಯಾಟ್ ಗೆ ಪೂಜೆ ಮಾಡಲಾಗಿದೆ. ಇನ್ನು ಬೆಳಗಾವಿಯ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲೂ ಪೂಜೆ ನೆರವೇರಿದ್ದು, ಜೈ ಆರ್ ಸಿ ಬಿ ಈ ಸಲ ಕಪ್ ನಮ್ದೆ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.

- Advertisement -

Latest Posts

Don't Miss