Monday, November 17, 2025

Latest Posts

ನಂದಿ ಬೆಟ್ಟಕ್ಕೆ ವಿಶೇಷ ಮೀಸಲು ಪಡೆ, ಸುರಕ್ಷಿತ ರಾಜ್ಯಕ್ಕಾಗಿ ಹೊಸ ಹೆಜ್ಜೆ!

- Advertisement -

ನಂದಿ ಬೆಟ್ಟದಲ್ಲಿ ಎರಡು ಭಾರತೀಯ ಮೀಸಲು ಪಡೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು–ಮೈಸೂರು ರಸ್ತೆಯ CER ಕೇಂದ್ರದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಮುಖ್ಯ ಕರ್ತವ್ಯವಾಗಿದೆ. ಕರ್ತವ್ಯದ ವೇಳೆ ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ಸರ್ಕಾರ ಅವರ ಪೋಷಣೆಗೆ ನೆರವಾಗುತ್ತದೆ. ಹಿಂಸಾಚಾರ ಹಾಗೂ ನೈತಿಕ ಪೊಲೀಸ್ ಗಿರಿಯನ್ನು ತಡೆಯಲು ಸ್ಪೆಷಲ್ ಆಕ್ಷನ್ ಫೋರ್ಸ್ ಅನ್ನು ಜಾರಿಗೆ ತಂದಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆಗಳ ಪ್ರಮಾಣ ಇತ್ತೀಚೆಗೆ ಕಡಿಮೆಯಾಗಿದೆ. ಇದಕ್ಕೆ ಕಾರಣರಾದ ಪೊಲೀಸರಿಗೆ ನಾನು ಅಭಿನಂದನೆ ತಿಳಿಸುತ್ತೇನೆ ಎಂದಿದ್ದಾರೆ.

ನಾಗರಿಕರ ಭದ್ರತೆಗಾಗಿ ಮನೆ ಮನೆಗೆ ಪೊಲೀಸ್ ಭೇಟಿ ಕಾರ್ಯಕ್ರಮ ಜಾರಿಗೆ ತರಲಾಗುತ್ತಿದೆ. ಎಸ್‌ಸಿ, ಎಸ್‌ಟಿ ಸಮುದಾಯದ ರಕ್ಷಣೆಗೆ DCRA ಪೊಲೀಸ್ ಠಾಣೆ ತೆರೆಯಲಾಗಿದೆ. ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೆರವಾಗಲು 10 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ ಎಂದು ಸಿಎಂ ವಿವರಿಸಿದರು.

ಇನ್ನು ರಾಜ್ಯದ ವಿವಿಧ ಭಾಗಗಳಲ್ಲಿ 116 ಮಂದಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲಾಗಿದೆ. ಕರ್ನಾಟಕದ ಪೊಲೀಸರು ಶ್ರಮ ಹಾಗೂ ಶೌರ್ಯದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವೆಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ಅಭಿಮಾನ ವ್ಯಕ್ತಪಡಿಸಿದರು.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss