ಮಾಜಿ ಸಿಎಂ ಸಿದ್ದರಾಮಯ್ಯ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೊರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ ಮರಳಿದ್ದೇನೆ. ಕಳೆದ 10 ದಿನಗಳಲ್ಲಿ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು. ವೈದ್ಯರ ಸಲಹೆಯಂತೆ ಒಂದು ವಾರ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದೇನೆ. ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ ದಿನದಿಂದ ಕಾಂಗ್ರೆಸ್ ಮತ್ತು ಬೇರೆ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು, ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಎಲ್ಲಕ್ಕಿಂತ ಮಿಗಿಲಾಗಿ ರಾಜ್ಯದ ಜನತೆ ಕಾಳಜಿಯಿಂದ ನನ್ನ ಆರೋಗ್ಯಕ್ಕಾಗಿ ಹಾರೈಸಿದ್ದಾರೆ. ಅವರೆಲ್ಲರಿಗೂ ಆಭಾರಿಯಾಗಿದ್ದೇನೆ, ಧನ್ಯವಾದಗಳು ಎಂದಿದ್ದಾರೆ.

ಇನ್ನು ನಳೀನ್ ಕುಮಾರ್ ಕಟೀಲ್ ಮಾಡಿದ ಪ್ರಶ್ನೆಗೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಮರುಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ ದಲಿತರ ಪರವೋ ಭಯೋತ್ಪಾದಕರ ಪರವೋ ಎಂದು ಕಟೀಲ್ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ನಳೀನ್ ಕುಮಾರ್ ಅವರೇ, ನಾವು ಮನುಷ್ಯರ ಪರ. ಮನುಷ್ಯವಿರೋಧಿಗಳ ಪರ ಅಲ್ಲ. ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ. ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ. ನಮ್ಮನ್ನು ಮತ್ತು ನಿಮ್ಮನ್ನು ಇದಕ್ಕಿಂತ ಚೆನ್ನಾಗಿ ಹೇಗೆ ಪರಿಚಯಿಸಲಿ ಹೇಳಿ? ಎಂದಿದ್ದಾರೆ.
ಅಲ್ಲದೇ, ನಳೀನ್ ಕುಮಾರ್ ಅವರೇ, ನೀವು ದಲಿತರ ಪರವೋ? ಹಿಂದೂಗಳ ಪರವೋ? ನೀವೊಬ್ಬ ಹಿಂದುವಾದರೆ, ಅಖಂಡ ಶ್ರೀನಿವಾಸಮೂರ್ತಿ ಯಾಕೆ ಹಿಂದು ಅಲ್ಲ? ಅವರು ಯಾಕೆ ಹಿಂದು ಆಗದೆ ಕೇವಲ ದಲಿತ ಆಗಿಬಿಟ್ಟರು? ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ನಿಮ್ಮ ಹಿರಿಯರಿಂದ ಕೇಳಿ ತಿಳಿದುಕೊಂಡು ಸ್ಪಷ್ಟಪಡಿಸುವಿರಾ? ಎಂದು ಮರುಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ರಾಜೀವ್ ತ್ಯಾಗಿ ನಿಧನಕ್ಕೆ ರಾಹುಲ್ ಗಾಂಧಿ ಬೇಸರ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ನೆ ಆಜ್ ಅಪ್ನಾ ಏಕ್ ಬಬ್ಬರ್ ಶೇರ್ ಖೋದಿಯಾ ಎಂದು ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಇಂದು ಒಬ್ಬ ಸಿಂಹವನ್ನು ಕಳೆದುಕೊಂಡಿದೆ. ಅವರ ಸಾವು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ರಾಹುಲ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಕೊರೊನಾ ತಗುಲಿ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಸ್ಥಿತಿ ಗಂಭೀರವಾಗಿತ್ತು. ಇದೀಗ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ್ದು ಈ ಬಗ್ಗೆ ಪ್ರಣಬ್ ಪುತ್ರ ಅಭಿಜೀತ್ ಮುಖರ್ಜಿ ಟ್ವೀಟ್ ಮಾಡಿದ್ದಾರೆ. ನನ್ನ ಅಪ್ಪ ಬದುಕಿದ್ದಾರೆ ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿದ್ದಾರೆ.
ಬಾಲಿವುಡ್ ನಟಿ ಆಲಿಯಾ ಭಟ್ ನಟಿಸಿರುವ ಸಡಕ್ 2 ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಲಕ್ಷಾಂತರ ಜನ ಈ ವೀಡಿಯೋವನ್ನ ಡಿಸ್‌ಲೈಕ್ ಮಾಡಿದೆ. ಸುಶಾಂತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಆಲಿಯಾ ಮತ್ತು ಮಹೇಶ್ ಭಟ್ ಹೆಸರು ಕೇಳಿ ಬಂದಿದ್ದು, ನೆಪೋಟಿಸಂ ವಿರೋಧಿಸಿರುವ ಜನ ಆಲಿಯಾ ಭಟ್ ಚಿತ್ರದ ಟ್ರೇಲರ್‌ನ್ನ ಡಿಸ್‌ಲೈಕ್ ಮಾಡಿದ್ದಾರೆ. 2 ಲಕ್ಷ 9 ಸಾವಿರ ಜನ ಲೈಕ್ ಬಟನ್ ಪ್ರೆಸ್ ಮಾಡಿದ್ರೆ, 53 ಲಕ್ಷ ಜನ ಈ ವೀಡಿಯೋಗೆ ಡಿಸ್‌ಲೈಕ್ ಕೊಟ್ಟಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.