Friday, July 11, 2025

Latest Posts

ಸಿಎಂಗೆ ಅರಸು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಯಾವ ನೈತಿಕ ಹಕ್ಕಿದೆ?

- Advertisement -

ದೇವರಾಜು ಅರಸು ಜನ್ಮದಿನಾಚರಣೆ ಮಾಡಿದ್ದರ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಎರಡು ವರ್ಷಗಳಿಂದ ಪ್ರತಿಷ್ಠಿತ ‘ದೇವರಾಜ ಅರಸು ಪ್ರಶಸ್ತಿ’ ಪ್ರದಾನ ಮಾಡದೆ ನಾಡಿನ ಹೆಮ್ಮೆಯ ನಾಯಕನಿಗೆ ಅಗೌರವ ತೋರಿದ ಬಿಜೆಪಿ ಸರ್ಕಾರದ ನಡೆ ಖಂಡನೀಯ. ಅರಸು ಅವರಿಗೆ ಅಗೌರವ ತೋರಿದ ಮುಖ್ಯಮಂತರಿಯವರಿಗೆ ಅರಸು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಯಾವ ನೈತಿಕ ಹಕ್ಕಿದೆ? ಮುಖ್ಯಮಂತ್ರಿಗಳೇ, ದೇವರಾಜ ಅರಸು ಅವರ ಮೇಲೆ ನಿಮಗೆ ಒಂದಿಷ್ಟಾದರೂ ಗೌರವ ಇದ್ದರೆ ಮೊದಲು ಅವರು ಜಾರಿಗೆ ತಂದಿದ್ದ ‘ಉಳುವವನನ್ನೇ ಭೂ ಒಡೆಯನನ್ನಾಗಿ ಮಾಡುವ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ‌ಮಾಡಿ. ಉಳ್ಳವನಿಗೆ ಭೂಮಿ ನೀಡಲು ಹೊರಟಿರುವ ನಿಮ್ಮ ತೀರ್ಮಾನವನ್ನು ಹಿಂದಕ್ಕೆ ಪಡೆಯಿರಿ.

ಮಾಜಿ ಸಿಎಂ ಕುಮಾರಸ್ವಾಮಿ, ದೇವರಾಜ ಅರಸರ ಜನ್ಮ ದಿನಕ್ಕೆ ಟ್ವೀಟ್ ಮೂಲಕ ಶುಭ ಕೋರಿದ್ದಾರೆ. ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ವಿನಮ್ರವಾಗಿ ಸ್ಮರಿಸಿಕೊಳ್ಳುತ್ತೇನೆ ಎಂದು ಹೆಚ್ಡಿಕೆ ಟ್ವೀಟ್ ಮಾಡಿದ್ದಾರೆ.

ಈ ಬಾರಿ ದೇಶದ ಸ್ವಚ್ಛನಗರಗಳ ಪಟ್ಟಿಯಲ್ಲಿ ಮೈಸೂರು 5ನೇ ಸ್ಥಾನದಲ್ಲಿದೆ. ಇಂದೋರ್‌ಗೆ ಈ ಬಾರಿಯೂ ಕೂಡ ದೇಶದ ಮೊದಲ ಸ್ವಚ್ಛ ನಗರದ ಸ್ಥಾನ ದೊರಕಿದೆ. ಸತತವಾಗಿ ನಾಲ್ಕನೇ ಬಾರಿ ಮೊದಲ ಸ್ಥಾನ ಪಡೆಯುವಲ್ಲಿ ಇಂದೋರ್ ಸಫಲವಾಗಿದೆ. ಸೂರತ್ ಎರಡನೇ ಸ್ಥಾನ ಪಡೆದರೆ, ಮುಂಬೈ ಮೂರನೇ ಸ್ಥಾನದಲ್ಲಿದೆ. ಇನ್ನು ಛತ್ತೀಸ್‌ಘಡದ ಅಂಬಾಕ್ನಗರ 4 ನೇ ಸ್ಥಾನದಲ್ಲಿದೆ. ಮೈಸೂರು 5ರಲ್ಲಿದ್ದರೆ, ಆಂಧ್ರಪ್ರದೇಶದ ವಿಜಯವಾಡ 6ನೇ ಸ್ಥಾನ, ಗುಜರಾತ್‌ನ ಅಹಮ್ಮದಾಬಾದ್ 7ನೇ ಸ್ಥಾನ, ನವದೆಹಲಿ ಎಂಟನೇ ಸ್ಥಾನ, ಮಹಾರಾಷ್ಟ್ರದ ಚಂದ್ರಾಪುರ್ ಒಂಬತ್ತನೇ ಸ್ಥಾನ ಹಾಗೂ ಮಧ್ಯಪ್ರದೇಶದ ಖಾರ್ಗೊನ್ ಹತ್ತನೇ ಸ್ಥಾನ ಪಡೆದಿದೆ.

ಇಂದು ಖುಷ್ಬೂ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋವೊಂದನ್ನ ಹಾಕಿದ್ದು, ಕಣ್ಣಿನ ಆಪರೇಶನ್ ಆಗಿದೆ ಎಂದು ತಿಳಿಸಿದ್ದಾರೆ. ಚಿಕ್ಕ ಆಪರೇಷನ್ ಆಗಿದ್ದು, ಆರೋಗ್ಯವಾಗಿದ್ದೇನೆ. ಕೆಲ ದಿನ ವಿಶ್ರಾಂತಿ ತೆಗೆದುಕೊಳ್ಳಲಿದ್ದೇನೆ ಎಂದಿದ್ದಾರೆ. ಈ ಬಗ್ಗೆ ಕಾಮೆಂಟ್ ಮಾಡಿರುವ ಅವರ ಫ್ಯಾನ್ಸ್, ಬೇಗ ಗುಣಮುಖರಾಗಿ ಎಂದು ವಿಶ್ ಮಾಡಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss