ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಟ್ವೀಟ್ ಮೂಲಕ ಅನೌನ್ಸ್ ಮಾಡಿದ್ದಾರೆ. ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ ಕೆಲವು ಪದವಿ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಸರಕಾರವೂ ಮುಂದಿನ ತಿಂಗಳಿಂದ ಅನ್ ಲೈನ್ ಮೂಲಕವೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧರಿಸಿದೆ ಎಂದು ಅಶ್ವತ್ಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಕೊರೊನಾ ತಗುಲಿದ್ದು, ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಬೇಗ ಗುಣಮುಖರಾಗಿರೆಂದು ವಿಶ್ ಮಾಡಿದ್ದಾರೆ. ಅಲ್ಲದೇ, ಸಿದ್ದರಾಮಯ್ಯ, ಮಾಜಿ ಪಿಎಂ ದೇವೇಗೌಡರು ಸೇರಿ ಹಲವು ರಾಜಕೀಯ ಮುಖಂಡರು ಟ್ವೀಟ್ ಮೂಲಕ ಹಾರೈಸಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ತನಿಖೆ ನಡೆಯುತ್ತಿದ್ದು, ದಿನಗಳೆದಂತೆ ಹಲವು ಪ್ರೂಫ್‌ಗಳು ಸಿಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ಕೂಡ ಈ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಸುಶಾಂತ್ ಫ್ಯಾನ್ಸ್ ಫೇಮಸ್ ರಿಯಾಲಿಟಿ ಶೋ ಬ್ಯಾನ್ ಮಾಡುವಂತೆ ಕ್ಯಾಂಪೇನ್ ನಡೆಸಿದ್ದಾರೆ. ಸಲ್ಮಾನ್ ಖಾನ್ ಕೋ ಪ್ರೊಡ್ಯುಸರ್ ಆಗಿರುವ ಕಪಿಲ್ ಶರ್ಮಾ ನಡೆಸಿಕೊಡುತ್ತಿರುವ ಕಾಮಿಡಿ ನೈಟ್ಸ್ ವಿತ್ ಕಪಿಲ್ ಶೋನ ಬ್ಯಾನ್ ಮಾಡಲು ಸುಶಾಂತ್ ಫ್ಯಾನ್ಸ್ ಆಗ್ರಹಿಸಿದ್ದಾರೆ.
ರ್ಯಾಪರ್ ಚಂದನ್ ಶೆಟ್ಟಿ ರಿಲೀಸ್ ಮಾಡಿರುವ ಆಲ್ಬಮ್ ಬಗ್ಗೆ ವಿರೋಧ ವ್ಯಕ್ತವಾಗಿದ್ದು, ಕೋಲುಮಂಡೆ ಜಂಗಮದೇವ ಆಲ್ಬಮ್ ಸಾಂಗ್‌ನ್ನ ಮಾಡರ್ನ್ ಸ್ಟೈಲ್‌ನಲ್ಲಿ ಪ್ರೆಸೆಂಟ್ ಮಾಡಿದ್ದಕ್ಕೆ ಚಂದನ್ ವಿರುದ್ಧ, ಹಿಂದೂ ಸಂಸ್ಕೃತಿಗೆ ಧಕ್ಕೆ ತಂದಿದ್ದಕ್ಕೆ ಕಬ್ಬನ್ ಪಾರ್ಕ್ ಫೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನು ಹಾಡಿನ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದ ಹಿನ್ನೆಲೆ ಚಂದನ್ ಶೆಟ್ಟಿ ಯ್ಯೂಟ್ಯೂಬ್‌ನಿಂದ ವೀಡಿಯೋ ಡಿಲೀಟ್ ಮಾಡಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




