Friday, September 26, 2025

Latest Posts

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಷಯ: ಸಿ.ಟಿ.ರವಿ ವಿರುದ್ಧ ಗುಂಡೂರಾವ್ ಆಕ್ರೋಶ..!

- Advertisement -

ವಿಜಯಪುರದ ಸಿಂದಗಿಯಲ್ಲಿ‌ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ. ಸಂವಿಧಾನವನ್ನು ಬದಲಾಯಿಸುತ್ತೇವೆ ಎನ್ನುವ, ಮೀಸಲಾತಿಯನ್ನು ವಿರೋಧಿಸುವ,‌ ದಲಿತರನ್ನು ಕೀಳಾಗಿ ಕಾಣುವ ನಾಯಕರಿಗೆ ಬಿಜೆಪಿ ನೀಡುತ್ತಿರುವ ಬೆಂಬಲವೇ ಇಂತಹ ಕೊಲೆಗಡುಕರು ನಿರ್ಭಯವಾಗಿ ಈ ರೀತಿಯ ದುಷ್ಕೃತ್ಯಕ್ಕೆ ಇಳಿಯಲು ಕಾರಣ. ಬಾಯಲ್ಲಿ ಸಮಾನತೆಯ ಮಂತ್ರ, ಆಚರಣೆಯಲ್ಲಿ ಅಸಮಾನತೆಯ ಕುತಂತ್ರ ಎಂದು ಕಿಡಿಕಾರಿದ್ದಾರೆ.

Karnataka TV Contact

ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ. ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸುವೆ ಎಂದಿದ್ದಾರೆ.

ಇನ್ನು ದಿನೇಶ್ ಗುಂಡೂರಾವ್ ಕೂಡ ರಾಯಣ್ಣ ಪ್ರತಿಮೆ ಹೋರಾಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ರಾಯಣ್ಣ ಪ್ರತಿಮೆಗಾಗಿ ಹೋರಾಟ ಮಾಡುತ್ತಿರುವ ಕನ್ನಡಿಗರನ್ನು ಸಚಿವ ಸಿ.ಟಿ.ರವಿ, ಪುಂಡರಿಗೆ ಹೋಲಿಸಿ ಅವಮಾನ ಮಾಡಿದ್ದಾರೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಯ ಹಿಂದೆ ಸಂಚು ಇದೆ ಎಂದು ಹೇಳುವ ಸಚಿವರು, ರಾಯಣ್ಣ ವಿಚಾರದಲ್ಲಿ ಬಿಜೆಪಿ ಸರ್ಕಾರದ ನಿಲುವೇನು..? ಎಂಬುದನ್ನು ಸ್ಪಷ್ಟ ಪಡಿಸಲಿ ಎಂದು ಆಗ್ರಹಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಷ್ಟಗಿ ಪೋಲೀಸ್ ಠಾಣೆಯಲ್ಲಿ ಚಪಲಚೆನ್ನಿಗರಾಯ ತಹಶೀಲ್ದಾರ್ ಗುರುಬಸವರಾಜನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಸರ್ಕಾರಿ ಕಚೇರಿಯಲ್ಲೇ ತಹಶೀಲ್ದಾರ್ ತಮ್ಮ​​ ಸಹೋದ್ಯೋಗಿಗೆ ಕಿಸ್ಸಿಂಗ್ ಮಾಡಿದ್ದ ಘಟನೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಈ ಕುರಿತು ಸಂತ್ರಸ್ತೆ ಮಹಿಳೆ ನ್ಯಾಯ ಕೊಡಿಸುವಂತೆ ಮತ್ತು ಕಾಮಪಿಶಾಚಿ ತಹಶೀಲ್ದಾರ್ ಗುರುಬಸವನ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಕುಷ್ಟಗಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪ್ರಕರಣ ಕುರಿತು ದೂರು ದಾಖಲಿಸಿಕೊಂಡ ಕುಷ್ಟಗಿ ಪೊಲೀಸರು ಐಪಿಸಿ ಸೆಕ್ಷನ್ 354, 354B, ಹಾಗೂ 506ರ ಅಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss