Sports News: ಕರ್ನಾಟಕದ ಖೋ ಖೋ ಕೋಚ್‌ಗಳನ್ನು ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ

Sports News: 2025ರ ಪುರುಷ ಮತ್ತು ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಎರಡೂ ತಂಡದಲ್ಲಿ ಭಾರತ ಗೆಲ್ಲಲು ಕಾರಣರಾಗಿದ್ದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಗೌತಮ್ ಮತ್ತು ಮೈಸೂರಿನ ಚೈತ್ರಾ ಅವರನ್ನು ಸಿಎಂ ಸಿದ್ದರಾಮಯ್ಯ ಇಂದು ಸನ್ಮಾನಿಸಿದ್ದಾರೆ. ಅಲ್ಲದೇ, ಇಬ್ಬರಿಗೂ ತಲಾ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.

2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡೂ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಲು ಪ್ರಮುಖ ಪಾತ್ರ ವಹಿಸಿದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರು ಜಿಲ್ಲೆಯ ಟಿ.ನರಸೀಪುರದ ಕುರಬೂರಿನ ಚೈತ್ರಾ ಅವರನ್ನು ಸನ್ಮಾನಿಸಿ, ಇಬ್ಬರಿಗೂ ತಲಾ 5 ಲಕ್ಷ ರೂಪಾಯಿಯ ಬಹುಮಾನ ಘೋಷಿಸಿ, ಕ್ರೀಡಾ ಬದುಕು ಮತ್ತಷ್ಟು ಯಶಸ್ಸುಗಳಿಂದ ಕೂಡಿರಲಿ ಎಂದು ಶುಭ ಹಾರೈಸಿದೆ.

About The Author