Sports News: ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೇಟಿಗೆ ಆರ್.ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಬಳಿಕ, ಅಶ್ವಿನ್ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಭಾವುಕರಾಗಿ ತಾವು ಅಂತರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ಆದರೆ ಐಪಿಎಲ್‌ನಲ್ಲಿ ಅಶ್ವಿನ್ ಮುಂದುವರಿಯಲಿದ್ದಾರೆ.
ಆದರೆ ಅಶ್ವಿನ್ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಉಳಿದಿದ್ದರೂ, ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸಡನ್ ಆಗಿ ಸರಣಿಯ ನಡುವೆಯೇ ಅವರು ನಿವೃತ್ತಿ ಘೋಷಿಸಿದ್ದು, ಇದು ಇನ್ನೊಬ್ಬರ ಒತ್ತಡದಿಂದ ತೆಗೆದುಕೊಂಡಿರಬಹುದಾದ ನಿರ್ಧಾರ ಎಂದು ಸುದ್ದಿಯಾಗುತ್ತಿದೆ.
ಈ ಮೊದಲು ಆಸ್ಟ್ರೇಲಿಯಾ ವಿರುದ್ಧ ಸರಣಿಯ ಬಳಿಕ ಟೀಮ್ ಇಂಡಿಯಾದಿಂದ ಇಬ್ಬರಿಗೆ ಗೇಟ್ ಪಾಸ್ ನೀಡಲಾಗುವುದು ಎಂದು ಹೇಳಲಾಗಿತ್ತು. ಅದರಂತೆ ಇಂದು ಆರ್.ಅಶ್ವಿನ್ ನಿವೃತ್ತಿ ತೆಗೆದುಕೊಂಡಿರಬಹುದು ಎಂದು ಹೇಳಲಾಗಿದೆ.
RAVI ASHWIN ANNOUNCES HIS RETIREMENT.
– An emotional speech by Ash. 🥹❤️pic.twitter.com/ZkVoKVD0m0
— Mufaddal Vohra (@mufaddal_vohra) December 18, 2024