Gadag News: ಗದಗ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಡೆದಿವೆ ಎನ್ನಲಾದ ಹಗರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ, ಶ್ರೀರಾಮಸೇನೆ ಗದಗದಲ್ಲಿ ಪ್ರತಿಭಟನೆ ನಡೆಸಿದೆ.
ಗದಗ ಜಿಲ್ಲಾಡಳಿತ ಭವನದ ಎದುರು ಶ್ರೀರಾಮಸೇನೆ ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ವಾಲ್ಮೀಕಿ ನಿಗಮದ ಹಗರಣ, ಭೋವಿ ಸಮಾಜದ ಅನುದಾನ ಹಗರಣ, SCP/TSP ಹಣ ದುರ್ಬಳಕೆ, ಅಂಬೇಡ್ಕರ್ ನಗಮದ ಅನುದಾನ ದುರ್ಬಳಕೆ ಕುರಿತು ಸರಿಯಾದ ತನಿಖೆ ಆಗಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಶ್ರೀರಾಮಸೇನೆ ರಾಜ್ಯ ಕಾರ್ಯದರ್ಶಿ ರಾಜು ಖಾನಪ್ಪನವರ, ಜಿಲ್ಲಾಧ್ಯಕ್ಷ ಸೋಮು ಗುಡಿ, ರಾಜ್ಯ ಶಾರೀರಿಕ ಪ್ರಮುಖ ಮಹೇಶ ರೋಖಡೆ ಸೇರಿದಂತೆ ಕಾರ್ಯಕರ್ತರು ಭಾಗಿಯಾಗಿದ್ದು, ದಲಿತರ ಹಣವನ್ನ ರಾಜ್ಯ ಸರ್ಕಾರ ಲೂಟಿ ಮಾಡ್ತಿದೆ. ಹಗರಣಗಳ ನಿಷ್ಪಕ್ಷಪಾತ ತನಿಖೆ ಮಾಡಬೇಕು, ತಪ್ಪಿತಸ್ಥರಿಗೆ ಶಿಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.