- Advertisement -
Ballari News:
ಸಾರಿಗೆ ಸಚಿವ ಶ್ರೀರಾಮುಲು ಹಾಗೂ ಮಾಜಿ ಶಾಸಕ ಸುರೇಶ್ ಬಾಬು ಪಾಲುದಾರನ ಮೇಲೆ ಐಟಿ ದಾಳಿಯಾಗಿದೆ ಶ್ರೀರಾಮುಲು, ಸುರೇಶ್ ಬಾಬು ಒಡೆತನದ ಫ್ಯಾಕ್ಟರಿ ನಡೆಸುತ್ತಿದ್ದ ಆಪ್ತರ ಮನೆ ಹಾಗೂ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಚಿವ ಶ್ರೀರಾಮುಲು ಹಾಗೂ ಕೈಲಾಸ್ ವ್ಯಾಸ್ ಸೇರಿ ಖರೀದಿಸಿದ ಹರಿ ಇಸ್ಪಾತ್ ಫ್ಯಾಕ್ಟರಿ ಮೇಲೂ ಸಹ ಐಟಿ ದಾಳಿಯಾಗಿದ್ದು, ಫ್ಯಾಕ್ಟರ್ ಖರೀದಿ ಹಣದ ಮೂಲ ಕೆದಕುತ್ತಿದ್ದಾರೆ.
ಬೆಂಗಳೂರು, ಬಳ್ಳಾರಿ, ಕೊಪ್ಪಳದಲ್ಲಿರುವ ಕೈಗಾರಿಕೋದ್ಯಮಿ ಕೈಲಾಸ್ ವ್ಯಾಸ್ ಪಾಲುದಾರಿಕೆಯ ಕಂಪನಿಗಳ ಮೇಲೆ ದಾಳಿಯಾಗಿದ್ದು, ಬಳ್ಳಾರಿಯ ವಿದ್ಯಾನಗರದ ರಾಗಾಸ್ ಪೋರ್ಟ್ ಅಪಾರ್ಟ್ಮೆಂಟ್ ಫ್ಲಾಟ್ ನಂಬರ್ 310 ಮತ್ತು 510ಪ್ಲಾಟ್ ನಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಗುಜರಾತಿನಲ್ಲಿ ಸ್ಯಾಂಟ್ರೊ ರವಿ ಬಂಧನದ ಬಗ್ಗೆ ಅನುಮಾನಗಳಿವೆ: ಹೆಚ್.ಡಿ.ಕುಮಾರಸ್ವಾಮಿ
- Advertisement -