ಬೆಳಗಾವಿ: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಆರೊಗ್ಯ ಯೋಜನೆಯಡಿ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ತಿಳಿಸಿದ್ದಾರೆ. ನಿನ್ನೆ ನಡೆದ ಕಲಾಪದಲ್ಲಿ ಶಾಸಕ ಮಂಜುನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು,ರಾಜ್ಯ ಸರ್ಕಾರವು 2011-12 ನೇ ಸಾಲಿನಿಂದ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆ ಎನ್ನುವ ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸುತಿದ್ದು 2016-17 ನೇ ಸಾಲಿನಲ್ಲಿ ಚಾಲಕರೊಂದಿಗೆ ನಿರ್ವಾಹಕರು ಹಾಗು ಕ್ಲೀನರ್ಸ್‍ಗಳಿಗೂ ಸಹ ಅಪಘಾತ ವಿಮಾ ಸೌಲಭ್ಯವನ್ನು ವಿಸ್ತರಿಸಲು ಪರಿಷ್ಕೃತ ಕರ್ನಾಟಕ ರಾಜ್ಯ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಈ ಯೋಜನೆಯಲ್ಲಿ ಅಪಘಾತದಿಂದ ಮರಣಹೊಂದಿದ ಪ್ರಕರಣಗಳಲ್ಲಿ ನಾಮನಿರ್ದೇಶಿತರಿಗೆ ರೂ. 5 ಲಕ್ಷ ಪರಿಹಾರ, ಸಂಪೂರ್ಣ ಶಾಶ್ವತ ದುರ್ಬಲತೆ ಪ್ರಕರಣಗಳಲ್ಲಿ ಫಲಾನುಭವಿಗಳಿಗೆ 5 ಲಕ್ಷ ರೂ. ವರೆಗೆ ಪರಿಹಾರ ಮತ್ತು ಒಳರೋಗಿಯಾಗಿ ಚಿಕಿತ್ಸೆ ಪಡೆದ್ದಲ್ಲಿ 1 ಲಕ್ಷ ರೂ. ವರೆಗೆ ಚಿಕಿತ್ಸಾ ವೆಚ್ಚದ ಮರುಪಾವತಿ ನೀಡಲಾಗುತ್ತದೆ. ಇನ್ನೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಆಟೋಚಾಲಕ ಹಾಗೂ ಕ್ಯಾಬ್ ಚಾಲಕ ಒಳಗೊಂಡಂತೆ ಆರ್ಥಿಕವಾಗಿ ಹಿಂದುಳಿದ ವರ್ಗದ ಅರ್ಹ ಕುಟುಂಬಗಳಿಗೆ ವಸತಿ ಸೌಲಭ್ಯ ಒದಗಿಸಲು ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
5 ಕೋಟಿಗೆ ಉಪಕುಲಪತಿ ಹುದ್ದೆ ಮಾರಾಟ : ತನಿಖೆಗೆ ಡಿ.ಕೆ.ಶಿವಕುಮಾರ್ ಒತ್ತಾಯ