film news
ನವರಸ ನಾಯಕ ನಟ ಜಗ್ಗೇಶ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಸಂತೋಶ್ ಆನಂದರಾಮ್ ನಿರ್ದೇಶನದ ಮತ್ತು ವಿಜಯ ಕಿರಿಗಂದೂರ್ ನಿರ್ಮಾಣದ ಸಿನಿಮಾ ರಾಘವೇಂದ್ರ ಸ್ಟೋರ್ ಸಿನಿಮಾ ಇದೇ ಏಪ್ರಿಲ್ 28 ರಂದು ಚಿತ್ರ ಮಂದಿರಗಳಲ್ಲಿ ತೆರೆಗೆ ಬರಲದೆ. ಮಾರ್ಚ 17 ರಂದು ನಟ ಜಗ್ಗೇಶ್ಅವರ ಹುಟ್ಟುಹಬ್ಬ ಇರುವ ಕಾರಣ ಅಂದೇ ರಾಘವೇಂದ್ರ ಸ್ಟೋರ್ ನ ಮಾಲಿಕರು ಚಿತ್ರ ರಸಿಕರಿಗೆ ಸಿಹಿ ವಿಷಯ ಹಂಚಿದ್ದಾರೆ. ನವಿರಾಗಿ ಸಿದ್ಧಪಡಿಸಿರುವ ನವರಸದೌತಣವನ್ನು ಏಪ್ರಿಲ್ 28 ರಂದು ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಉಣಬಡಿಸಲಿದ್ದೇವೆ. ವಯಸ್ಸು ಕೈ ಜಾರಿದೆ, ಕೈ ಹಿಡಿಯಲು ಒಂದು ವಧು ಬೇಕಿದೆ ಎಂದು ಹೊಂಬಾಳೆ ಫಿಲಂಸ್ ಟ್ವೀಟ್ ಮಾಡಿದೆ.
ಅಡುಗೆ ಬಾಣಸಿಗರೊಬ್ಬರ ಕಥಾನಕವನ್ನು ಹೊಂದಿರುವ ರಾಘವೇಂದ್ರ ಸ್ಟೋರ್ಸ್ ಚಿತ್ರವನ್ನು ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲಂಸ್ ಬ್ಯಾನರ್ ನಡಿ ವಿಜಯ್ ಕಿರಗಂದೂರು ಅವರು ನಿರ್ಮಾಣ ಮಾಡಿದ್ದಾರೆ. ಈ ಮೊದಲು ಸಿನಿಮಾವನ್ನು ಒಟಿಟಿಯಲ್ಲಿ ರಿಲೀಸ್ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು, ಆದರೆ ನಿರ್ಮಾಪಕರು ಚಿತ್ರವನ್ನು ಥಿಯೇಟರ್ ನಲ್ಲಿ ರಿಲೀಸ್ ಮಾಡಲು ನಿರ್ಧರಿಸಿದ್ದಾರೆ.
ರಾಘವೇಂದ್ರ ಸ್ಟೋರ್ಸ್ ಸಿನಿಮಾಗೆ ಅತ್ಯುತ್ತಮ ನಿರ್ದೇಶನ, ಸಂಗೀತ ಸಂಕಲನ ಮತ್ತು ಛಾಯಾಗ್ರಹಣವಿದೆ, ಇದು ಕನ್ನಡ ಪ್ರೇಕ್ಷಕರ ಮನ ಗೆಲ್ಲುವ ವಿಶ್ವಾಸವಿದೆ ಎಂದು ನಟ ಜಗ್ಗೇಶ್ ಇನ್ಸ್ಟಾ ದಲ್ಲಿ ಬರೆದುಕೊಂಡಿದ್ದಾರೆ.
‘ರಾಘವೇಂದ್ರ ಸ್ಟೋರ್ಸ್’ ಸಿನಿಮಾದಲ್ಲಿ ಜಗ್ಗೇಶ್‌ಗೆ ನಾಯಕಿಯಾಗಿ ಶ್ವೇತಾ ಶ್ರೀವಾತ್ಸವ್ ಅಭಿನಯಿಸಿದ್ದಾರೆ. ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದೆ. ‘ರಾಘವೇಂದ್ರ ಸ್ಟೋರ್ಸ್’ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.