- Advertisement -
www.karnatakatv.net: ರಾಜ್ಯ: ಬೆಂಗಳೂರು- SSLC ಪರೀಕ್ಷಾ ದಿನಾಂಕ ಪ್ರಕಟವಾಗಿದ್ದು, ಈ ಬಾರಿ ಕೇವಲ 2 ದಿನ ಮಾತ್ರ ಪರೀಕ್ಷೆ ನಡೆಯಲಿದೆ. ಜುಲೈ 19 ಹಾಗೂ 22ರಂದು SSLC ಪರೀಕ್ಷೆ ನಡೆಯಲಿದೆ. ಒಂದು ದಿನಕ್ಕೆ 3 ಪರೀಕ್ಷೆಗಳು ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜುಲೈ 19ರಂದು ಕೋರ್ ವಿಷಯಗಳ ಪರೀಕ್ಷೆ(ಗಣಿತ, ಸಮಾಜ ವಿಜ್ಞಾನ, ವಿಜ್ಞಾನ) ನಡೆಯಲಿದ್ದು, ಜುಲೈ 22ರಂದು ಭಾಷೆಗಳ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷಾ ಸಮಯ ನಿಗದಿ ಪಡಿಸಲಾಗಿದೆ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ರು.
- Advertisement -