ಮಂಡ್ಯ: ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಇರುವ ಹಿನ್ನೆಲೆ ಮಂಡ್ಯದಲ್ಲಿ ಪರೀಕ್ಷೆಗೆ ಸಕಲ ಸಿದ್ಧತೆ ನಡೆಸಲಾಗಿದೆ.
ಎಲ್ಲಾ ಕಟ್ಟುನಿಟ್ಟಿನ ಕ್ರಮದೊಂದಿಗೆ SSLC ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ 82 ಕೇಂದ್ರಗಳಲ್ಲಿ ಒಟ್ಟು 21260 ಪರೀಕ್ಷೆ ಬರೆಯಲಿದ್ದಾರೆ. ಜೂನ್ 25ರಿಂದ ಜುಲೈ3ರವೆರೆಗೆ ಪರೀಕ್ಷೆ ನಡೆಯಲಿದ್ದು, ಪರಿಕ್ಷೇಯಲ್ಲಿ 11,099 ಗಂಡು ಮಕ್ಕಳು ಹಾಗೂ 10,161 ಹೆಣ್ಣು ಮಕ್ಕಳು ಪಾಲ್ಗೊಳ್ಳಲಿದ್ದಾರೆ.
ನೆಗೆಡಿ, ಕೆಮ್ಮು, ಜ್ವರ ಕಂಡುಬಂದರೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಪರಿಕ್ಷಾ ಕೇಂದ್ರಗಳಿಗೆ ಕೊಠಡಿ ಹಾಗೂ ಕಾರಿಡಾರ್‌ಗಳಿಗೆ ಸಿಸಿ ಟಿವಿ ಅಳವಡಿಕೆ ಮಾಡಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನಿಂಗ್ ಹಾಗೂ ಸ್ಯಾನಿಟೈಜರ್ ವ್ಯವಸ್ಥೆ ಮಾಡಲಾಗಿದ್ದು, ಕಂಟೋನ್ಮೆಂಟ್ ಜೋನ್ ಪ್ರದೇಶದಲ್ಲಿ ಪರೀಕ್ಷಾ ಕೇಂದ್ರ ನಿಷೇಧ ಮಾಡಲಾಗಿದೆ.
ಒಂದು ಕೊಠಡಿಯಲ್ಲಿ 18 ರಿಂದ 20 ವಿದ್ಯಾರ್ಥಿಗಳಿಗೆ 3 ಅಡಿ ಅಂತರದ ವ್ಯವಸ್ಥೆ ಮಾಡಲಾಗಿದೆ. ಹೊರ ಜಿಲ್ಲೆ ಹಾಗೂ ಹೊರ ತಾಲೂಕಿನ ವಲಸೆ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಅವರ ಸ್ಥಳದಲ್ಲೇ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಿಕೊಡಲಾಗಿದೆ.
ಪ್ರತಿ ವಿದ್ಯಾರ್ಥಿಗಳಿಗೆ 2 ಮಾಸ್ಕ್ ವಿತರಿಸಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ವಾಹನದ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ತಪಾಸಣೆ ಇರುತ್ತದೆ. ವೈದ್ಯರ ತಂಡ ನೇಮಕ ಹಾಗೂ ಪೋಲಿಸರ ನಿಯೋಜನೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರ ಗಳಲ್ಲಿ ಕಟ್ಟುನಿಟ್ಟಿನ ಕ್ರಮದೊಂದಿಗೆ ಪರೀಕ್ಷೆ ನಡೆಯಲಿದೆ ಎಂದು ಮಂಡ್ಯ ಡಿಡಿಪಿಐ ರಘುನಂದನ್ ಮಾಹಿತಿ ನೀಡಿದ್ದಾರೆ.