Monday, December 23, 2024

Latest Posts

SSLC ಪರೀಕ್ಷೆ ವೇಳಾಪಟ್ಟಿ ಪ್ರಕಟ..!

- Advertisement -

ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(KARNATAKA SECONDARY EDUCATION EXAMINATION BOARD) 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್(MARCH) 28ರಂದು ಪರೀಕ್ಷೆಗಳು ಆರಂಭವಾಗುತ್ತದೆ.ಮಾರ್ಚ್ ಮತ್ತು ಏಪ್ರಿಲ್‌(APRIL) ತಿಂಗಳಿನಲ್ಲಿ ಪರೀಕ್ಷೆಗಳು ನಡೆಯಲಿವೆ. ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದರೆ ಪರೀಕ್ಷೆ ನಡೆಸುವ ಕುರಿತು ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳನ್ನು ಪರೀಕ್ಷೆ ಆರಂಭದಲ್ಲಿ ನೀಡಲಾಗುತ್ತದೆ. ಅಂಧ, ಕಿವುಡ ಮತ್ತು ಮೂಗ ಹಾಗೂ ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ, ಪರೀಕ್ಷೆ ಬರೆಯಲು ನಿಗದಿಪಡಿಸಿರುವ ಸಮಯದ ಜೊತೆಗೆ 1 ಗಂಟೆಯ ಸಮಯವನ್ನು ಹೆಚ್ಚುವರಿಯಾಗಿ ನೀಡಲಾಗುತ್ತದೆ. ಮಾರ್ಚ್ 28ರ ಸೋಮವಾರ; ಕನ್ನಡ, ತೆಲಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಶ್, ಇಂಗ್ಲೀಶ್ (ಎನ್‌ಸಿಇಆರ್‌ಟಿ), ಸಂಸ್ಕೃತ. ಮಾರ್ಚ್ 30ರ ಬುಧವಾರ ದ್ವಿತೀಯ ಭಾಷೆ ಇಂಗ್ಲೀಶ್, ಕನ್ನಡ, ಏಪ್ರಿಲ್ 1ರಂದು ಎಲಿಮೆಂಟ್ಸ್ ಆಫ್ ಮೆಕಾನಿಕಲ್ & ಎಲೆಕ್ಟ್ರಿಕಲ್ ಇಂಜಿನಿಯರಿಂಗ್ -2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್, ಎಲಿಮೆಂಟ್ಸ್‌ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಏಪ್ರಿಲ್ 4ರಂದು ಗಣಿತ, ಸಮಾಜ ಶಾಸ್ತ್ರ ಪರೀಕ್ಷೆ ನಡೆಯಲಿದೆ. ಏಪ್ರಿಲ್ 6ರ ಬುಧವಾರ ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ. ಏಪ್ರಿಲ್ 8 ಹಿಂದಿ, ಕನ್ನಡ, ಇಂಗ್ಲೀಶ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ ನೆಸ್. ಏಪ್ರಿಲ್ 11ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ ಹಿಂದೂಸ್ತಾನಿ ಸಂಗೀತ ಪರೀಕ್ಷೆಗಳು ನಡೆಯಲಿವೆ.

- Advertisement -

Latest Posts

Don't Miss