Saturday, April 19, 2025

Latest Posts

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ..!

- Advertisement -

www.karnatakatv.net :ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ 2021ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದಾರೆ.

ಎಸ್ ಎಸ್ ಎಲ್ ಸಿ ಪೂರಕ ಪರಿಕ್ಷೆಯು ಸೆ.27 ಮತ್ತು 29 ರಂದು ನಡೆದಿದ್ದು, ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮೀತಗೊಳಿಸಿ ಪರೀಕ್ಷೆ ನಡೆಸಲಾಗಿತ್ತು. 53 ಸಾವಿರದ 155 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 29 ಸಾವಿರದ 522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ರಾಜ್ಯದಲ್ಲಿ ಶೇಕಡಾ 55.54 ಫಲಿತಾಂಶ ದಾಖಲಾಗಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.

ಕರ್ನಾಟಕ ಟಿವಿ- ಬೆಂಗಳೂರು


- Advertisement -

Latest Posts

Don't Miss