“ಎಸ್.ಟಿ ಮೀಸಲಾತಿ ಶೀಘ್ರದಲ್ಲೇ ಏರಿಕೆ “: ಶ್ರೀರಾಮುಲು

Banglore  News:

ರಾಜ್ಯದ ಪರಿಶಿಷ್ಟ ಪಂಗಡ ಸಮುದಾಯದವರಿಗೆ ಶೀಘ್ರ ಸಿಹಿಸುದ್ದಿಯನ್ನು ರಾಜ್ಯ ಸರ್ಕಾರ ನೀಡಲಿದೆ. ಅವರ ಬಹುದಿನದ ಬೇಡಿಕೆಯಾದ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬಗ್ಗೆ ಸುಳಿವು ನೀಡಿರುವ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ಇದರ ಜೊತೆಜೊತೆಯಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಟಾಂಗ್ ನೀಡಿದ್ದಾರೆ.

ಈಗಲೂ ನನ್ನ ಮಾತಿಗೆ ‌ನಾನು ಬದ್ದವಾಗಿದ್ದೇನೆ. ನನ್ನ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು ಶೇ. 3% ರಿಂದ 7.5%ಗೆ ಹೆಚ್ಚಿಸಲು ಸರ್ಕಾರದ ಮೇಲೆ ಎಲ್ಲಾ ರೀತಿಯ ಪ್ರಯತ್ನ ನಡೆಸಿದ್ದೇನೆ‌. ಅಧಿಕಾರಕ್ಕಿಂತ ಸಮುದಾಯದ ಹಿತ ಮುಖ್ಯ ಎಂಬುದು ನನಗೂ ಗೊತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

‘ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಪ್ರಮಾಣವನ್ನು 3% ರಿಂದ 7.5% ಹೆಚ್ಚಿಸುವ ಬಗ್ಗೆ ನಿ.ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಜಾರಿಗೊಳಿಸುವಂತೆ ನಮ್ಮ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದ್ದು, ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ.ಅದಷ್ಟು ಶೀಘ್ರ ನಮ್ಮ ಸಮುದಾಯಕ್ಕೆ ಸಿಹಿ ಸುದ್ದಿಯನ್ನು ನಮ್ಮ ಸರ್ಕಾರವೇ ಕೊಡಲಿದೆ. ಮೀಸಲಾತಿ ಸಂಬಂಧ ನಾನು ಹೇಳಿರುವ ಮಾತಿನಿಂದ ಒಂದು ಇಂಚು ಹಿಂದೆ ಸರಿಯಲ್ಲ. ನಾನು ಅದಕ್ಕೆ ಬದ್ಧನಾಗಿದ್ದೇನೆ. ಇದು ಕಾನೂನಿನ ವಿಷಯವಾಗಿದ್ದು, ಸ್ವತಃ ವಕೀಲರಾಗಿರುವ ಸಿದ್ದರಾಮಯ್ಯಗೆ ಅರ್ಥವಾಗದಿರುವುದಕ್ಕೆ ನನಗೆ ವಿಷಾದವಿದೆ.! ಎಂದು  ಶ್ರೀರಾಮುಲು ಹೇಳಿಕೊಂಡಿದ್ದಾರೆ.

ಚುನಾವಣೆ ಸಮೀಪಿಸುತ್ತಿರುವಾಗ ಇದನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳುತ್ತಿರುವುದು ನಿಮ್ಮ ರಾಜಕೀಯ ದಿವಾಳಿತನಕ್ಕೆ ಹಿಡಿದ ಕೈಗನ್ನಡಿ. ಕಡೆ ಪಕ್ಷ 5 ವರ್ಷ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಬಗ್ಗೆ ಒಂದು ಸಣ್ಣ ಆಲೋಚನೆ ನಿಮ್ಮ ತಲೆಯಲ್ಲಿ ಹೊಳೆದಿತ್ತೇ ಎಂದು ಪ್ರಶ್ನಿಸಿ  ಟಾಂಗ್  ನೀಡಿದ್ದಾರೆ.

ರಾಜ್ಯ ಸರ್ಕಾರ ವಿರುದ್ಧ ಸಿಡಿದೆದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯ: ಹಿಗ್ಗಾಮುಗ್ಗಾ ವಾಗ್ಧಾಳಿ

ಮೈಸೂರು ದಸರಾ: ಫಿರಂಗಿ ಗಾಡಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ

ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ರಾಜ್ಯದಲ್ಲಿ ಆರು ಕಡೆಗಳಲ್ಲಿ Rally – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

About The Author