Sports News: ಐಪಿಯಲ್ 18ನೇ ಆವೃತ್ತಿಯಲ್ಲಿ ಟ್ರೋಫಿಯನ್ನು ಗೆದ್ದಿರುವ ಆರ್‌ಸಿಬಿ ವಿಜಯೋತ್ಸವದ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದ ಘಟನೆಯನ್ನು ಕೂಲಂಕುಷವಾಗಿ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಥಾವರ್‌ಚಂದ್ ಗೆಹ್ಲೋಟ್ ಅವರು ಸೂಚನೆ ನೀಡಿದ್ದಾರೆ.
ದುರ್ಘಟನೆಯ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ, ಕ್ರಮ ಕೈಗೊಳ್ಳಿ..
ಆರ್‌ಸಿಬಿಯ ಐಪಿಎಲ್ ವಿಜಯೋತ್ಸವದ ಸಂಭ್ರಮಾಚರಣೆ ಸಮಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ದುರಂತದ ಕುರಿತು ನನಗೆ ವಿಷಾದವಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ದುರಂತದ ಬಗ್ಗೆ ಸರ್ಕಾರ ಕೂಲಂಕಷ ತನಿಖೆ ನಡೆಸಬೇಕು ಎಂದು ತಿಳಿಸಿದ್ದಾರೆ.
ನನಗೆ ದುಖಃವಾಗಿದೆ, ಇಂತಹ ಘಟನೆಗಳು ಮರುಕಳಿಸಬಾರದು..
ದುರಂತದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಗೆ ಕಾರಣವಾದ ಲೋಪಗಳನ್ನು ಕೂಲಂಕಷವಾಗಿ ತನಿಖೆ ಮಾಡಿ ಸರ್ಕಾರ ಕ್ರಮಕೈಗೊಳ್ಳಬೇಕು. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ರಾಜ್ಯಪಾಲ ಗೆಹ್ಲೋಟ್ ಹೇಳಿದ್ದಾರೆ.
ಸರ್ಕಾರದ ವಿರುದ್ಧ ಹೆಚ್ಚಾಯ್ತು ಆಕ್ರೋಶ..!
ಇನ್ನೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿಜಯೋತ್ಸವ ಸಂಭ್ರಮವನ್ನು ಚರಿಸಲು ಬುಧವಾರ ಕಾರ್ಯಕ್ರಮ ಆಯೋಜಿಲಾಗಿತ್ತು. ಈ ವೇಳೆ ಆರ್‌ಸಿಬಿ ಆಟಗಾರರನ್ನು ನೋಡಲು ಜನರು ಮುಗಿ ಬಿದ್ದದ್ದು, ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 47 ಮಂದಿ ಗಾಯಗೊಂಡಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರವು ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿ ಮೃತರ ಕುಟುಂಬಗಳಿಗೆ ಪರಿಹಾರವನ್ನೂ ಘೋಷಿಸಿದೆ. ಅಲ್ಲದೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈ ಪ್ರಕರಣದ ತನಿಖೆ ನಡೆಸಿ 15 ದಿನಗಳ ಒಳಗೆ ವರದಿ ನೀಡಲು ಸೂಚಿಸಲಾಗಿದೆ. ಆದರೆ ರಾಜ್ಯ ಸರ್ಕಾರದ ವಿರುದ್ಧ ಘಟನೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಯಾರೇ ತಪ್ಪಿತಸ್ಥರಿದ್ದರು ಕ್ರಮ ಕೈಗೊಳ್ಳುತ್ತೇವೆ..
ಇನ್ನೂ ಘಟನೆ ಕುರಿತು ಗೃಹ ಸಚಿವ ಡಾ.ಜಿ ಪರಮೇಶ್ವರ್ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಕ್ರಿಕೆಟ್ ಇತಿಹಾಸದಲ್ಲಿ ಈ ರೀತಿ ಘಟನೆ ಎಂದೂ ಆಗಿಲ್ಲ. ಘಟನೆಯಲ್ಲಿ ನಿಧನರಾದವರ ಆತ್ಮಕ್ಕೆ ಶಾಂತಿಕೋರುತ್ತೇನೆ. ಜಿಲ್ಲಾಧಿಕಾರಿ ನೇತೃತ್ವದ ತನಿಖೆಗೆ ಆದೇಶ ಮಾಡಿದ್ದಾರೆ. ಯಾರೇ ತಪ್ಪಿತಸ್ಥರಿದ್ದರು ಕ್ರಮ ಕೈಗೊಳ್ಳುತ್ತೇವೆ. ಘಟನೆ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ಮುಂದೆ ಹೀಗಾದಂತೆ ತಡೆಯಲು ನಿಯಮ ರೂಪಿಸುತ್ತೇವೆ. ದೊಡ್ಡ ಸಮಾರಂಭ ಮಾಡುವಾಗ ಪೊಲೀಸ್ ಇಲಾಖೆ ನಿಯಮದಂತೆ ಮಾಡಬೇಕು ಎಂದು ತಿಳಿಸಿದ್ದಾರೆ.
ಅಲ್ಲದೆ ವಿಪಕ್ಷಗಳೂ ಸಹ ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆಯ ವೈಫಲ್ಯದ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಪ್ರಕರಣದ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದೆ. ಇನ್ನೂ ಈ ದುರ್ಘಟನೆಗೆ ಕಾರಣವಾದವರ ವಿಚಾರದಲ್ಲಿ ಆರೋಪ – ಪ್ರತ್ಯಾರೋಪಗಳು ಜೋರಾಗಿ ನಡೆಯುತ್ತಿರುವ ಹೊತ್ತಿನಲ್ಲೇ ಕುಟುಂಬದ ಕುಡಿಗಳನ್ನು ಕಳೆದುಕೊಂಡ ನೊಂದ ಪೋಷಕರ ಕಣ್ಣೀರಿಗೆ ಹೊಣೆ ಯಾರು..? ಎಂಬ ಪ್ರಶ್ನೆ ಉಧ್ಭವಿಸಿದೆ.