ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಾಳಿಯಿಂದ ಆರಂಭವಾಗಲಿದೆ. ಇದರ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲ್ಲಿರುವ ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಅಸ್ತು ಸಿಕಿದೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮಕ್ಕೆ ಬಿಬಿಎಂಪಿ ಗ್ರಿನ್ ಸಿಗ್ನಲ್ ಕೊಟ್ಟಿದೆ. ಈ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಒಪ್ಪಿದ ಬಿಬಿಎಂಪಿ ಕೊವಿಡ್ ನಿಯಮಗಳನ್ನು ಪಾಲಿಸುವಂತೆ ಷರತ್ತು ಬದ್ಧ ಅನುಮತಿಯನ್ನು ನೀಡದ್ದಾರೆ.
ಮತ್ತೆ ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಪಾದಯಾತ್ರೆ ನಡೆಸಲಿದೆ. ನಾಳೆಯೇ 2ನೇ ಹಂತದ ಪಾದಯಾತ್ರೆ ಆರಂಭವಾಗಲ್ಲಿದೆ. ಈ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಪಾದಯಾತ್ರೆ ಆರಂಭವಾಗುವ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ನಡೆಸಿದ್ದಾರೆ. ಜನರಿಕೊಸ್ಕರ ಈ ಪಾದಯಾತ್ರೆ ಮಾಡುತ್ತಿದ್ದೇವೆ. ಎಲ್ಲರಿಗೂ ಇಲ್ಲಿ ಮುಕ್ತವಾದ ಆಹ್ವಾನವಿದೆ. ಯಾರು ಬೇಕಾದರೂ ಈ ಪಾದಯಾತ್ರೆಯಲ್ಲಿ ಪಾಲ್ಗೂಳ್ಳಬಹುದು. ಈ ಪಾದಯಾತ್ರೆಯನ್ನು ಇತಿಹಾಸದ ಪುಟಕ್ಕೆ ಸೇರಿಸುವ ಒಂದು ಅವಕಾಶ ಇದು. ನಾವು ಎಷ್ಟು ದಿನ ಬದುಕಿರುತ್ತೇವೆ ಗೊತ್ತಿಲ್ಲ. ಬದುಕಿದ್ದಾಗ ಏನು ಮಾಡುತ್ತೇವೆ ಎಂಬುವುದು ಮುಖ್ಯ. ನಾಳೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ದರ್ಗಾದಲ್ಲಿ ಪ್ರಾರ್ಥನೆ ಮಾಡಿ ಪಾದಯಾತ್ರೆ ಆರಂಭವಾಗಲ್ಲಿದೆ. ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುಜೇವಾಲ ಚಾಲನೆ ನೀಡಲಿದ್ದಾರೆ. ಶಾಸಕರು, ಮಾಜಿ ಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.