Sandalwood News: 2019ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು, ‘ಪೈಲ್ವಾನ್’ ಚಿತ್ರದ ಅಭಿನಯಕ್ಕಾಗಿ ಸುದೀಪ್ ಅವರಿಗೆ ಅತ್ಯುತ್ತಮ ನಟ ಮತ್ತು ‘ತ್ರಯಂಬಕಂ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ಪಿ. ಶೇಷಾದ್ರಿ ನಿರ್ದೇಶನದ ಮೋಹನ ದಾಸ ಚಿತ್ರವು ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.
ಕಳೆದ ವರ್ಷ 2019ನೇ ಸಾಲಿನ ರಾಜ್ಯ ಪ್ರಶಸ್ತಿ ಆಯ್ಕೆ ಸಮಿತಿಯನ್ನು ಸರ್ಕಾರ ರಚಿಸಿತ್ತು. ನಂಜುಂಡೇಗೌಡ ನೇತೃತ್ವದ ಈ ಸಮಿತಿಯಲ್ಲಿ ರಾಮನಾಥ ಋಗ್ವೇದಿ, ಮಳವಳ್ಳಿ ಸಾಯಿಕೃಷ್ಣ, ಪೂಜಾ ಗಾಂಧಿ, ಶ್ರೀಧರ್ ಸಂಭ್ರಮ್ ಮುಂತಾದವರು ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರೆ.
2019ರ ಸಾಲಿನ ಕ್ಯಾಲೆಂಡರ್ ವರ್ಷದ ಚಲನಚಿತ್ರ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಿದ್ದ ಒಟ್ಟು 180 ಚಿತ್ರಗಳ ಪೈಕಿ, ನಿಮಾನುಸಾರ ಇಲ್ಲದಿರುವ ಎಂಟು ಚಿತ್ರಗಳನ್ನು ಹೊರತುಪಡಿಸಿ, 172 ಚಿತ್ರಗಳನ್ನು ವೀಕ್ಷಿಸಿ, ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪಟ್ಟಿ ಈ ಕೆಳಕಂಡಂತೆ ಇದೆ:
ಅತ್ಯುತ್ತಮ ಅತ್ಯುತ್ತಮ ಚಿತ್ರ: ಮೋಹನ ದಾಸ
ದ್ವಿತೀಯ ಅತ್ಯುತ್ತಮ ಚಿತ್ರ: ಲವ್ ಮಾಕ್ಟೈಲ್
ಮೂರನೇ ಅತ್ಯುತ್ತಮ ಚಿತ್ರ: ಅರ್ಘ್ಯಂ
ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಕನ್ನೇರಿ
ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಇಂಡಿಯಾ ವರ್ಸಸ್ ಇಂಗ್ಲೆಂಡ್
ಅತ್ಯುತ್ತಮ ಮಕ್ಕಳ ಚಿತ್ರ: ಎಲ್ಲಿ ಆಡೋದು ನಾವು ಎಲ್ಲಿ ಆಡೋದು
ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ಗೋಪಾಲ ಗಾಂಧಿ (ನಾಗೇಶ್ ಎನ್)
ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ: ತಲಾಕ್ ತಲಾಕ್ ತಲಾಕ್ (ಬ್ಯಾರಿ ಭಾಷೆ)
ಅತ್ಯುತ್ತಮ ಪೋಷಕ ನಟ: ತಬಲಾ ನಾಣಿ (ಕೆಮಿಸ್ಟ್ರಿ ಆಫ್ ಕಾರ್ಯಪ್ಪ)
ಅತ್ಯುತ್ತಮ ಪೋಷಕ ನಟಿ: ಕುಮಾರಿ ಅನೂಷಾ ಕೃಷ್ಣ (ಬ್ರಾಹ್ಮಿ)
ಅತ್ಯುತ್ತಮ ಕಥೆ: ಜಯಂತ್ ಕಾಯ್ಕಿಣಿ (ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ)
ಅತ್ಯುತ್ತಮ ಚಿತ್ರಕಥೆ: ಡಾರ್ಲಿಂಗ್ ಕೃಷ್ಣ (ಲವ್ ಮಾಕ್ಟೇಲ್)
ಅತ್ಯುತ್ತಮ ಸಂಭಾಷಣೆ: ಬರಗೂರು ರಾಮಚಂದ್ರಪ್ಪ (ಅಮೃತಮತಿ)
ಅತ್ಯುತ್ತಮ ಛಾಯಾಗ್ರಹಣ: ಜಿ.ಎಸ್. ಭಾಸ್ಕರ್ (ಮೋಹನದಾಸ)
ಅತ್ಯುತ್ತಮ ಸಂಗೀತ ನಿರ್ದೇಶನ: ವಿ ಹರಿಕೃಷ್ಣ (ಯಜಮಾನ)
ಅತ್ಯುತ್ತಮ ಸಂಕಲನ: ಜಿ. ಬಸವರಾಜ್ ಅರಸ್ (ಝಾನ್ಸಿ IPS)
ಅತ್ಯುತ್ತಮ ಬಾಲನಟ: ಮಾಸ್ಟರ್ ಪ್ರೀತಂ (ಮಿಂಚುಹುಳು)
ಅತ್ಯುತ್ತಮ ಬಾಲನಟಿ: ಬೇಬಿ ವೈಷ್ಣವಿ ಅಡಿಗ (ಸುಗಂಧಿ)
ಅತ್ಯುತ್ತಮ ಕಲಾ ನಿರ್ದೇಶನ: ಹೊಸ್ಮನೆ ಮೂರ್ತಿ (ಮೋಹನ ದಾಸ)
ಅತ್ಯುತ್ತಮ ಗೀತ ರಚನೆ: ರಝಾಕ್ ಪುತ್ತೂರು (ಪೆನ್ಸಿಲ್ ಬಾಕ್ಸ್)
ಅತ್ಯುತ್ತಮ ಹಿನ್ನೆಲೆ ಗಾಯಕ: ರಘು ದೀಕ್ಷಿತ್ (ಲವ್ ಮಾಕ್ಟೇಲ್)
ಅತ್ಯುತ್ತಮ ಹಿನ್ನೆಲೆ ಗಾಯಕಿ: ಡಾ. ಜಯದೇವಿ ಜಂಗಮ ಶೆಟ್ಟಿ (ರಾಗಭೈರವಿ)
ತೀರ್ಪುಗಾರರ ವಿಶೇಷ ಪ್ರಶಸ್ತಿ: ಅಮೃತಮತಿ ಮತ್ತು ತಮಟೆ ನಟಸಿಂಹಯ್ಯ