ಹಾಸನ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಸನ ಜಿಲ್ಲಾ ಘಟಕದ ವತಿಯಿಂದ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪಾಂಡುರಂಗ ಅನಂತಕುಮಾರ್ ಮಾತನಾಡಿ, ಸರಕಾರ ರೈತರಿಗೆ ಮಾರಕವಾಗಿರುವ ಯೋಜನೆಗಳನ್ನು ರೂಪಿಸುವ ಮೂಲಕ ಸಂಕಷ್ಟ ಎದುರಿಸುವಂತಾಗಿದ್ದು, ಸರಕಾರದ ರೈತ ವಿರೋಧಿ ನಡೆಯನ್ನು ರಾಜ್ಯ ರೈತ ಸಂಘ ಖಂಡಿಸುತ್ತದೆ ಎಂದರು.
ರಾಜ್ಯ ಕಚೇರಿ ಜೆಪಿ ಭವನದಲ್ಲಿ ಹೆಚ್ ಡಿಕೆ ಸಭೆ : ನಿಧಾನಗತಿಯ ಅಭ್ಯರ್ಥಿಗಳಿಗೆ ಖಡಕ್ ಎಚ್ಚರಿಕೆ
ಕಳೆದ ಮೂರ್ನಾಲ್ಕು ವರ್ಷಗಳಿಂದ ಸಂಭವಿಸಿರುವ ಅತಿವೃಷ್ಟಿಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದು ರಾಜ್ಯ ಸರಕಾರ ರೈತರ ಪಂಪ್ ಸೆಟ್ ಗಳಿಗೆ ವಿಧ್ಯುತ್ ಮೀಟರ್ ಅಳವಡಿಸಲು ಮುಂದಾಗಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಅಲ್ಲದೆ ಕಳೆದ ಅನೇಕ ವರ್ಷಗಳಿಂದ ರೈತರ ಸಾಲ ಮನ್ನಾ ಮಾಡಲು ಸರಕಾರ ಹಿಂದೇಟು ಹಾಕುತ್ತಿದ್ದು ,ಸಂಕಷ್ಟದ ರೈತರಿಗೆ ನೆರವಾಗುವಲ್ಲಿ ವಿಫಲವಾಗಿದೆ ಎಂದು ದೂರಿದರು. ಚುನಾವಣೆ ವೇಳೆ ರೈತರ ಬಳಿ ಬರುವ ಜನಪ್ರತಿನಿಧಿಗಳು ರೈತರ ಹಿತರಕ್ಷಣೆ ಕಾಪಾಡುವಲ್ಲಿ ವಿಫಲವಾಗಿವೆ. ಕೂಡಲೇ ಸರಕಾರ ರೈತರ ಸಾಲ ಮನ್ನಾ ಮಾಡಿ, ರೈತರ ಬೆಳೆಗಳಿಗೆ ಉತ್ತಮ ಬೆಲೆ ನಿಗದಿ ಮಾಡಬೇಕು ಎಂದು ಹೇಳಿದರು.
ರಾಜ್ಯ ಕಚೇರಿ ಜೆಪಿ ಭವನದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಭೆ
ಆಲಮಟ್ಟಿ ಜಲಾಶಯ ನೀರಿನ ಮಟ್ಟವನ್ನು 519 ಅಡಿಯಿಂದ 524 ಕ್ಕೆ ಏರಿಸಬೇಕು ರೈತರಿಗೆ ಮಾರಕವಾಗಿರುವ ಕಾಯಿದೆಗಳನ್ನು ಹಿಂಪಡೆಯಬೇಕು. ಇಲ್ಲವಾದರೆ ರಾಜ್ಯಾಧ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಒಕ್ಕಲಿಗರ ಸೇನೆಯ ರಾಜ್ಯಾಧ್ಯಕ್ಷ ರಾಕೇಶ್ ಗೌಡ, ರೈತ ಮುಖಂಡರಾದ ಸುರೇಶ್ ಬಾಬು, ಮಂಜುನಾಥ್, ಸಂದೀಪ್, ಮಣಿಕಂಠ, ರವಿ, ನವೀನ್, ಇತರರು ಇದ್ದರು.
ಪ್ರತಿವಾರ ಕಾಂಗ್ರೆಸ್ ಪಕ್ಷಕ್ಕೆ ಒಬ್ಬೊಬ್ಬರ ಸೇರ್ಪಡೆ : ಡಿಕೆ ಶಿವಕುಮಾರ್