Wednesday, June 18, 2025

Latest Posts

State Government : ನಾಳೆಯಿಂದ 3 ದಿನ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ..!

- Advertisement -

ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಸರ್ಕಾರ (State Government) ನಾಳೆಯಿಂದ ಮೂರು ದಿನಗಳ ಕಾಲ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ (high schools and colleges) ರಜೆ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ಈಗ ರಾಜ್ಯದಾದ್ಯಂತ ವ್ಯಾಪಿಸಿದ್ದು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು ಪರಿಸ್ಥಿತಿ ಈಗ ಬಿಗಡಾಯಿಸಿದೆ. ಇನ್ನು ಹಿಜಾಬ್ ಧರಿಸಲು ಅವಕಾಶ ಕೋರಿ ವಿದ್ಯಾರ್ಥಿಯೊಬ್ಬರು ಅರ್ಜಿಯನ್ನು ಸಲ್ಲಿಸಿದ್ದರು ಈ ವಿಚಾರ ಇಂದು ಹೈಕೋರ್ಟ್ (High Court)ನಲ್ಲಿ ವಿಚಾರಣೆ ನಡೆಯುತ್ತಿದ್ದು, ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ನ್ಯಾಯಾಧೀಶರಾದ ಕೃಷ್ಣ ಎಸ್ ದೀಕ್ಷಿತ್ (Krishna S Dixit) ಕ್ಕೆ ಮುಂದೂಡಿದ್ದಾರೆ. ಇದೇ ಸಮಯದಲ್ಲಿ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವ ಅಶ್ವತ್ ನಾರಾಯಣ (Higher Education Minister Ashwath Narayana), (ಶಿಕ್ಷಣ ಸಚಿವ ಬಿಸಿ ಪಾಟೀಲ್) ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಹದಗೆಡುತ್ತಿರುವದರ ಕಾರಣ ಹಿಜಾಬ್ ವಿವಾದ ಕುರಿತಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಶಾಂತಿಯನ್ನ ಕಾಪಾಡಲು ನಾಳೆಯಿಂದ ಮೂರು ದಿನಗಳ ಕಾಲ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ. ನಾಳೆಯಿಂದ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ ಮೂರು ದಿನ ರಜೆ ಇರಲಿದೆ.

- Advertisement -

Latest Posts

Don't Miss