Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ ನೀಡಲಾಗಿದೆ. ಸರ್ಕಾರದ ಈ ಆದೇಶದ ವಿರುದ್ಧ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಕ್ಷರಶಃ ಬಂಧನದಲ್ಲಿರಿಸಿ, ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಿ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಿ ಸರ್ವಾಧಿಕಾರಿತನ ಮೆರೆದ 70 ರ ದಶಕದ ಕಾಂಗ್ರೆಸ್ ಕರಾಳ ಇತಿಹಾಸ ಕರ್ನಾಟಕದಲ್ಲಿ ಈಗ ಮರುಕಳಿಸಿದೆ! ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.
ದ್ವೇಷ ಭಾಷಣ ಕಾಯ್ದೆಯನ್ನು ಜಾರಿಗೆ ತರುವ ದುಸ್ಸಾಹಸ ನಡೆಸಿರುವ ಬೆನ್ನಲ್ಲೇ ವಿಧಾನಸೌಧದಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ ಹೇರುವ ನಿರ್ಬಂಧ ಹೇರಲು ಮಾಧ್ಯಮ ಸ್ವಾತಂತ್ರ್ಯವನ್ನು ನಿಯಂತ್ರಿಸುವ ಸುತ್ತೋಲೆ ಹೊರಡಿಸಿ, ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ. ಇದೊಂದು ಪ್ರಜಾಪ್ರಭುತ್ವ ವ್ಯವಸ್ತೆಯನ್ನು ಅಣಕಿಸುವ ಅವಿವೇಕತನದ ಸರ್ವಾಧಿಕಾರಿ ಧೋರಣೆಯಲ್ಲದೇ ಮತ್ತೇನೂ ಅಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.
ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮ ಕ್ಷೇತ್ರವೆಂದರೆ ಕಾಂಗ್ರೆಸ್ಸಿಗರಿಗೆ ಈ ಮೊದಲಿನಿಂದಲೂ ಅಪಥ್ಯ. ಸಂದರ್ಭ ಬಂದಾಗಲೆಲ್ಲಾ ಮಾಧ್ಯಮದವರ ಮೇಲೆ ದಬ್ಬಾಳಿಕೆ ನಡೆಸುವ ಸಂಸ್ಕೃತಿ ಕಾಂಗ್ರೆಸ್ಸಿಗರು ರೂಢಸಿಕೊಂಡಿದ್ದಾರೆ. ಅದರ ಮುಂದುವರೆದ ಭಾಗವಾಗಿ ಭದ್ರತೆಯ ಹೆಸರಿನಲ್ಲಿ ಮಾಧ್ಯಮ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲು ಹೊರಟಿರುವ ಈ ನಿರ್ಧಾರ ಅತ್ಯಂತ ಖಂಡನೀಯ ಹಾಗೂ ನಾಚಿಕೆಗೇಡಿತನದ ಪರಮಾವಧಿಯಾಗಿದೆ.
ಈ ಕೂಡಲೇ ಈ ಸುತ್ತೋಲೆಯನ್ನು ವಾಪಾಸು ಪಡೆದು, ಕಾಂಗ್ರೆಸ್ ಸರ್ಕಾರ ಮಾಧ್ಯಮ ಬಂಧುಗಳ ಕ್ಷಮೆ ಯಾಚಿಸಬೇಕು. ಪ್ರಜಾಪ್ರಭುತ್ವ ದೇಗುಲ ವಿಧಾನಸೌಧದಲ್ಲಿ ಪಾಳೇಗಾರಿಕೆ ವ್ಯವಸ್ಥೆಯನ್ನು ಅಸ್ತಿತ್ವಕ್ಕೆ ತರಲು ಹೊರಟಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ! ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಕ್ಷರಶಃ ಬಂಧನದಲ್ಲಿರಿಸಿ, ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಿ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಿ ಸರ್ವಾಧಿಕಾರಿತನ ಮೆರೆದ 70 ರ ದಶಕದ @INCKarnataka ಕರಾಳ ಇತಿಹಾಸ ಕರ್ನಾಟಕದಲ್ಲಿ ಈಗ ಮರುಕಳಿಸಿದೆ!
ದ್ವೇಷ ಭಾಷಣ ಕಾಯ್ದೆಯನ್ನು ಜಾರಿಗೆ ತರುವ… pic.twitter.com/spNtd8GM0h
— Vijayendra Yediyurappa (@BYVijayendra) February 18, 2026




