Wednesday, September 11, 2024

Latest Posts

ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ: ಡಿಕೆಶಿ ಕಿಡಿ

- Advertisement -

political news

ಬೆಂಗಳೂರು(ಫೆ.15): ಪ್ರಸ್ತುತ ಇರುವ ರಾಜ್ಯ ಸರ್ಕಾರ ಇನ್ನು ಕೆಲವೇ ತಿಂಗಳು ಇರುವುದರಿಂದ ಎಲ್ಲಾ ಇಲಾಖೆಗಳಲ್ಲಿ ತರಾತುರಿಯಾಗಿ ಟೆಂಡರ್ ಕರೆಯುತ್ತಿದೆ. 500 ಕೋಟಿ ರೂ ಟೆಂಡರ್ ಅನ್ನು 1000 ಕೋಟಿಗೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ, ಬಜೆಟ್ ಸೆಷನ್ ಮುಗಿದ ಮೇಲೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಹೀಗಾಗಿ ಜಲಸಂಪನ್ಮೂಲ, ಇಂಧನ, ಆರೋಗ್ಯ ಸೇರಿ ಎಲ್ಲಾ ಇಲಾಖೆಗಳಲ್ಲಿ ತರಾತುರಿಯಲ್ಲಿ ಟೆಂಡರ್ ಕರೆಯಲಾಗುತ್ತಿದೆ. ಎರಡು ಪಟ್ಟು ಹೆಚ್ಚು ಮೊತ್ತಕ್ಕೆ ಎಸ್ಟಿಮೇಟ್ ಮಾಡುತ್ತಿದ್ದಾರೆ. ಏಳು ದಿನ ಮಾತ್ರ ಟೈಂ ಕೊಟ್ಟು, ಗುತ್ತಿಗೆದಾರರನ್ನು ಸೆಟ್ ಮಾಡಲು ಶಾಸಕರಿಗೆ ಹಂಚಿಬಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಇದೇ ರೀತಿ ಸಿದ್ದರಾಮಯ್ಯ ಅವರು ಕೂಡ ಆರೋಪ ಮಾಡಿದ್ದು, ಈ ಗೋಲ್ಮಾಲ್ ಗೆ ಸಿಎಂ ಬೊಮ್ಮಾಯಿ ಕಾರಣ ಎಂದು ತಿಳಿಸಿದ್ದಾರೆ. ತಾವು ಈ ಹಗರಣವನ್ನು ಇಲ್ಲಿಗೇ ಬಿಡದೇ ಕೋರ್ಟ್ ಮೊರೆ ಹೋಗುತ್ತೇವೆ, ಸರ್ಕಾರದಿಂದ ಒಂದೇ ದಿನ 18 ಸಾವಿರ ಕೋಟಿ ರೂ ಟೆಂಡರ್ ಆಗಿದೆ. ಚುನಾವಣೆಯಲ್ಲಿ ತಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ತನಿಖಾ ಸಮಿತಿ ರಚನೆ ಮಾಡಿ ಹಗರಣ ಬಯಲಿಗೆಳೆಯುತ್ತೇವೆ. ಯಾರ ಮೇಲಾದರೂ ಆರೋಪ ಇದ್ದರೂ ಎಲ್ಲವನ್ನೂ ತನಿಖೆಗೆ ನೀಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

Latest Posts

Don't Miss