ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ..

Political News: ಸಿಎಂ ಸಿದ್ದರಾಮಯ್ಯನವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಕೆಲವೇ ತಿಂಗಳಲ್ಲಿ 5 ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದಿದ್ದರು. ಅದರಂತೆ ಇಂದು 5ನೇನ ಗ್ಯಾರಂಟಿಯಾದ ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದರು.

ವಿಧಾನಸೌಧದ ಬ್ಲ್ಯಾಂಕೇಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಿಎಂ ಸಿದ್ದರಾಮಯ್ಯನವರು, ಈ ಯೋಜನೆಗೆ ಚಾಲನೆ ನೀಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ, ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

2022-23ನೇ ಸಾಲಿನಲ್ಲಿ ಪದವಿ ಪಡೆದು ಆರು ತಿಂಗಳಾದರೂ ಉದ್ಯೋಗ ಸಿಗದ ನಿರುದ್ಯೋಗಿ ಯುವಜನರ ಮೇಲಿನ ಆರ್ಥಿಕ ಒತ್ತಡವನ್ನು ತಗ್ಗಿಸಿ, ಇಷ್ಟದ ಉದ್ಯೋಗ ಪಡೆಯಲು ನೆರವಾಗುವ ಉದ್ದೇಶದೊಂದಿಗೆ ರೂಪಿಸಿರುವ ಯೋಜನೆಯೇ ಯುವನಿಧಿ. ಈ ಯೋಜನೆಯಡಿ 2023ರಲ್ಲಿ ತೇರ್ಗಡೆಯಾದ ಎಲ್ಲಾ ಪದವೀಧರರು ಹಾಗೂ ಡಿಪ್ಲೋಮಾ ಉತ್ತೀರ್ಣರಾದವರು ಕನಿಷ್ಠ 6 ತಿಂಗಳವರೆಗಿನ ಉದ್ಯೋಗ ದೊರೆಯದೆ ಇದ್ದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿ ವಾಸವಿರುವವರು, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರಿಸದೆ ಇರುವವರಿಗೆ ಈ ಯೋಜನೆ ಅನ್ವಯವಾಗಲಿದ್ದು, ಕರ್ನಾಟಕ ಒನ್‌, ಬೆಂಗಳೂರು ಒನ್‌, ಗ್ರಾಮ ಒನ್‌ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇಂದಿನಿಂದ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಇಂದಿನಿಂದ 5ನೇ ಗ್ಯಾರಂಟಿ ಜಾರಿ.. ನಾವು ಭರವಸೆ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಯುವನಿಧಿ” ಯೋಜನೆಯ ಅರ್ಜಿ ಸಲ್ಲಿಕೆಗೆ ಇಂದು ಚಾಲನೆ ನೀಡಲಾಗುತ್ತಿದೆ. ಡಿಪ್ಲೊಮಾ ಹಾಗೂ ಪದವೀಧರ ಯುವಸಮುದಾಯ ಉದ್ಯೋಗ ದೊರಕುವವರೆಗೆ ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ಯುವಸಮುದಾಯ ಈ ದೇಶದ ಆಸ್ತಿ, ಆ ಅತ್ಯಮೂಲ್ಯ ಆಸ್ತಿಯನ್ನು ಕಾಪಾಡಿಕೊಳ್ಳುವುದು ನಮ್ಮ ಸರ್ಕಾರದ ಹೊಣೆ ಎಂದಿದೆ.

About The Author