www.karnatakatv.net: ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿದೆ. ಜುಲೈ 1 ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆಯನ್ನು ಶೇ.3ರಷ್ಟು ಹೆಚ್ಚಿಸಿದೆ. ನೌಕರನ ಮೂಲ ವೇತನದ ಶೇ.21.50ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ.24.50ಗೆ ಏರಿಸಲಾಗಿದೆ.
ಸಶಸ್ತ್ರ ಪಡೆಗಳ ಸಿಬ್ಬಂದಿ ಹಾಗೂ ರೈಲ್ವೆ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಸಂಬoಧಿಸಿದoತೆ ಪ್ರತ್ಯೇಕ ಆದೇಶವನ್ನು ಸಂಬoಧಪಟ್ಟ ಸಚಿವಾಲಯಗಳು ಹೊರಡಿಸಲಿವೆ. ಜುಲೈನಲ್ಲಿ ರಾಜ್ಯ ಸರ್ಕಾರವು ತನ್ನ ನೌಕರರಿಗೆ ಶೇ 11.15ರಿಂದ 21.50ಕ್ಕೆ ತುಟ್ಟಿ ಭತ್ಯೆ ಹೆಚ್ಚಿಸಿತ್ತು. ಡಿಎ ಹೆಚ್ಚಳದಿಂದ 6 ಲಕ್ಷ ಸರ್ಕಾರಿ ನೌಕರರು, 4.5 ಲಕ್ಷ ಪಿಂಚಣಿದಾರರು ಮತ್ತು ವಿವಿಧ ನಿಗಮ ಮಂಡಳಿಗಳಲ್ಲಿ ಸೇವೆ ಸಲ್ಲಿಸುತ್ತಿರುವ 3 ಲಕ್ಷ ಉದ್ಯೋಗಿಗಳಿಗೆ ಅನುಕೂಲವಾಗಲಿದೆ.
ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ 3ರಷ್ಟು ತುಟ್ಟಿಭತ್ಯೆ ನೀಡುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದ್ದು, ಈ ಹೊಸ ಪ್ರಸ್ತಾವವೂ ಅನುಷ್ಠಾನಕ್ಕೆ ಬಂದ ನಂತರ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯು ಶೇ 31ಕ್ಕೆ ಏರಿಕೆಯಾಗಲಿದೆ ಎಂದು ತಿಳಿದುಬಂದಿದೆ. ಈ ಕುರಿತು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, 47.14 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗುವಂತೆ ಕೇಂದ್ರ ಕ್ಯಾಬಿನೆಟ್ ಗುರುವಾರ ತುಟ್ಟಿ ಭತ್ಯೆ ಮತ್ತು ಅನ್ಯಾಯ ಪರಿಹಾರವನ್ನು ಶೇಕಡಾ 3 ರಿಂದ 31 ಕ್ಕೆ ಹೆಚ್ಚಿಸಿದೆ ಎಂದು ಹೇಳಿದರು.