Wednesday, December 3, 2025

Latest Posts

ಜಲಸಮಾಧಿಯಾದ ಮೃತರ ಕುಟುಂಬಗಳಿಗೆ ಸಿಎಂ ಪರಿಹಾರ..!

- Advertisement -

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಒಂದೇ ದಿನ 7 ಮಂದಿ  ಜಲಸಮಾಧಿಯಾಗಿದ್ದು ಇದೀಗ ಮೃತರ ಕುಟುಂಬಸ್ಥರಿಗೆ ಸಿಎಂ ಪರಿಹಾರ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಪ್ರತ್ಯೇಕ ಪ್ರಕರಣಗಳಲ್ಲಿ ಭಾನುವಾರ ಒಂದೇ ದಿನ 7 ಮಂದಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿತ್ತು.. ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿ ಗ್ರಾಮದ ಗೀತಾ ಮತ್ತು ಮಕ್ಕಳಾದ ಸವಿತಾ, ಸೌಮ್ಯ ಕುಟುಂಬಸ್ಥರಿಗೆ 5 ಲಕ್ಷ ರೂ ಹಾಗೂ ಚೋಳಸಂದ್ರ ಗ್ರಾಮದ ರಶ್ಮಿ, ಇಂಚರಾ ಕುಟುಂಬಕ್ಕೆ ತಲಾ 2 ಲಕ್ಷ ಹಾಗೆಯೇ ಕೆ.ಆರ್.ಪೇಟೆ ತಾಲ್ಲೂಕಿನ ಹುಳಿಗಂಗನಹಳ್ಳಿಯ ಅಭಿಷೇಕರ್, ಆದಿಹಳ್ಳಿ ಗ್ರಾಮದ ಕುಮಾರ್ ಕುಟುಂಬಸ್ಥರಿಗೆ 2 ಲಕ್ಷ ರೂ ಪರಿಹಾರವನ್ನ ಸಿಎಂ ಪರಿಹಾರ ನಿಧಿಯಿಂದ ಘೋಷಣೆ ಮಾಡಲಾಗಿದ್ದು ತುರ್ತಾಗಿ ಹಣ ಬಿಡುಗಡೆ ಮಾಡುವಂತೆ ಸಿಎಂ ಸೂಚನೆ.

ಪ್ರವೀಣ್ ಕುಮಾರ್ ಜಿ.ಟಿ, ಕರ್ನಾಟಕ ಟಿವಿ, ಮಂಡ್ಯ

https://www.youtube.com/watch?v=19Ira7H9uBU
- Advertisement -

Latest Posts

Don't Miss