ಅಮರನಾಥದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ – ಸಿಎಂ ಬೊಮ್ಮಾಯಿ

ಬೆಂಗಳೂರು: ಅಮರನಾಥದಲ್ಲಿ ಮೇಘಸ್ಪೋಟದಿಂದ 15 ಜನ ಸಾವನ್ನಪ್ಪಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ನೂರಕ್ಕೂ ಹೆಚ್ಚು ಜನ ಕನ್ನಡಿಗರು ಅಮರನಾಥ ಯಾತ್ರೆಯಲ್ಲಿದ್ದಾರೆ. ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ಅಮರನಾಥ ಯಾತ್ರ ಕೈಗೊಂಡಿದ್ದ ಕನ್ನಡಿಗರು ಸುರಕ್ಷಿತವಾಗಿದ್ದು, ಬೇರೆ ಯಾವ ಅಹಿತರಕರ ಸುದ್ದಿಯೂ ಬಂದಿಲ್ಲ. ಅಲ್ಲಿಯ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಜೊತೆ ಸಂಪರ್ಕದಲ್ಲಿದ್ದೇವೆ ಎಂದರು.

ರಕ್ಷಣಾ ಕಾರ್ಯಕ್ಕಾಗಿ ಸಹಾಯವಾಣಿಯನ್ನೂ ಸಹ ತೆರೆಯಲಾಗಿದೆ. ಈಗಾಗಲೇ 15-20 ಜನ ಕರೆ ಮಾಡಿ ತಾವು ಸಿಲುಕಿರುವ ಸ್ಥಳದ ಬಗ್ಗೆ ಮಾಹಿತಿ ನೀಡಿದ್ದಾರೆ. ರಕ್ಷಣಾ ಕಾರ್ಯವನ್ನು ಕೂಡಲೇ ಕೈಗೊಳ್ಳಲಾಗುವುದು ಎಂದರು.

ಕೇಂದ್ರ ಸರ್ಕಾರ, ಗಡಿ ರಕ್ಷಣಾ ಪಡೆ, ಇಂಡಿಯನ್ ಟಿಬೆಟ್ ಫೋರ್ಸ್ ಎಲ್ಲರೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರೆ. ಮುಖ್ಯ ಕಾರ್ಯದರ್ಶಿಗಳು ನೇರವಾಗಿ ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದಾರೆ. ತೊಂದರೆಗೆ ಸಿಲುಕಿರುವವರು ಸಹಾಯವಾಣಿಗೆ ಕರೆ ಮಾಡಿದರೆ. ಕೂಡಲೇ ರಕ್ಷಣೆಗೆ ಕ್ರಮ ವಹಿಸಲಾಗುವುದು ಎಂದರು.

ಸಹಾಯವಾಣಿಯ ವಿವರ

ಎನ್.ಡಿ.ಆರ್.ಎಫ್: 011-23438252, 011-23438253

ಕಶ್ಮೀರ್ ಡಿವಿಷನಲ್ ಹೆಲ್ಪ್ ಲ್ಲೈನ್: 0914- 2496240

ದೇವಸ್ಥಾನ ಮಂಡಳಿಯ ಸಹಯಾವಾಣಿ: 0194-2313149

ಕರ್ನಾಟಕ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ : 080-1070, 22340676

ಸಹಾಯವಾಣಿ 24 ಗಂಟೆಗಳ ಕಾಲವೂ ಕಾರ್ಯನಿರ್ವಹಿಸಲಿದೆ.

About The Author