Political News: ಚಾಮರಾಜನಗರ ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಬಂದು 75 ವರ್ಷ ಆದರೂ ಸಾಮಾಜಿಕ ನ್ಯಾಯ ಈಡೇರಿಲ್ಲ. ಅವಕಾಶ ವಂಚಿತ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಅರಿಯಲು ಸಮೀಕ್ಷೆ ನಡೆಸಿದ್ದೇವೆ. 2015 ರಲ್ಲಿ ನಡೆಸಿದ ಸಮೀಕ್ಷೆ ಬಳಿಕ ಬಂದ ಸಿಎಂ ಗಳು ಸ್ವೀಕರಿಸಿಲ್ಲ. ನಾನು ಸ್ವೀಕರಿಸಿ ಕ್ಯಾಬಿನೆಟ್ ಮುಂದೆ ಇಟ್ಟಿದ್ದೀನಿ. ಇದು ಯಾರ ವಿರುದ್ಧವೂ ಇರುವ ಸಮೀಕ್ಷೆ ಅಲ್ಲ. ಎಲ್ಲರ ಸ್ಥಿತಿ ಗತಿ ತಿಳಿಯುವ ಸಮೀಕ್ಷೆ ಮಾತ್ರ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್”ನೆ ನೀಡಿದ್ದಾರೆ.
ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ. ನಮ್ಮ ಪರವಾಗಿ ಇರುವವರು ಯಾರು ಎಂದು ತಿಳಿದು ಆಶೀರ್ವಾದ ಮಾಡಿ.
ಚಾಮರಾಜನಗರ ಜಿಲ್ಲೆ ಅತ್ಯಂತ ಹಿಂದುಳಿದಿರುವ ಜಿಲ್ಲೆ. ಇಲ್ಲಿನ ಯುವಕರಿಗೆ ಉತ್ತಮ ಶಿಕ್ಷಣ ಸಿಗಬೇಕಿದೆ. ಶಿಕ್ಷಣ ಕಲಿಯಬೇಕಿದ್ದರೆ ಹಾಸ್ಟೆಲ್‌ಗಳ ಅಗತ್ಯವೂ ಇದೆ. ಸಮುದಾಯ ಭವನ ಕಟ್ಟಿ. ಆದರೆ, ಇದಕ್ಕಿಂತ ಹೆಚ್ಚಾಗಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಿ. ಜಿಲ್ಲೆಯ ಎಲ್ಲಾ ಹಿಂದುಳಿದ ಸಮುದಾಯಗಳ ಬಡ ಮಕ್ಕಳಿಗೆ ಶೈಕ್ಷಣಿಕ ನೆರವು ದೊರಕುವಂತೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ಹೇಳಿದ್ದಾರೆ.