- Advertisement -
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್ ಕೊಚ್ಚಿಹೋಗಿದೆ. ನಾಲ್ಕು ದಿನಗಳ ಬಳಿಕ ತಾತ್ಕಾಲಿಕ ಗೇಟ್ ನಿರ್ಮಾಣ ಮಾಡಲು ಜಿಲ್ಲಾ ಉಸ್ತುವರಿ ಸಚಿವ ಜಮೀರ್ ಅಹ್ಮದ್ ಖಾನ್ ಪೂಜೆ ನೆರವೇರಿಸಿದ್ದಾರೆ.
ಡ್ಯಾಂ ಗೇಟ್ಗಳ ತಾಂತ್ರಿಕ ತಜ್ಞ ಕನ್ನಯ್ಯ ನಾಯ್ಡು ಅವರ ನೇತೃತ್ವದಲ್ಲಿ ತಾತ್ಕಾಲಿಕ ಗೇಟ್ ನಿರ್ಮಾಣ ಮಾಡಲಾಯಿತು. ಎರಡು ದಿನಗಳಲ್ಲಿ ಗೇಟ್ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ಸಾಧ್ಯತೆಯಿದೆ.
ಡ್ಯಾಂನ ಕ್ರಸ್ಟ್ ಗೇಟ್ ಮುರಿದಿರುವ ಕಾರಣದಿಂದಾಗಿ ಅನಿವಾರ್ಯವಾಗಿ 29 ಗೇಟ್ಗಳಿಂದ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದ ಸುಮಾರು 21 ಟಿಎಂಸಿಯಷ್ಟು ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ಭೋರ್ಗರೆಯುವ ನೀರನ್ನು ತಡೆದು ಗೇಟ್ ಅಳವಡಿಸುವುದೇ ದೊಡ್ಡ ಸವಾಲಾಗಿದೆ.
- Advertisement -