Thursday, December 12, 2024

Latest Posts

ಬೀದಿ ನಾಟಕ, ಜಾನಪದ ಸಂಗೀತ ಕಲಾತಂಡಗಳ ಆಯ್ಕೆಗೆ ಅರ್ಜಿ ಆಹ್ವಾನ

- Advertisement -

State News:
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2022-23ನೇ ಸಾಲಿನಲ್ಲಿ ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆಮಾಡಲು ಅರ್ಜಿ ಆಹ್ವಾನಿಸಿದೆ.

ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ ತಂಡದಲ್ಲಿ 8 ಜನ ಕಲಾವಿದರಿರಬೇಕು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದ ಕಲಾವಿದರಾಗಿರಬೇಕು. ಮತ್ತು ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಒಬ್ಬರು ಮಹಿಳೆ ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಠ ಪಂಗಡಕ್ಕೆ ಸೇರಿದವರಾಗಿರಬೇಕು.

ಮಂಡ್ಯ ಜಿಲ್ಲೆಯ ಆಸಕ್ತ ಕಲಾತಂಡಗಳು ಅಕ್ಟೋಬರ್ 17 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹೆಚ್.ಕೆ.ವೀರಣ್ಣ ಗೌಡ ರಸ್ತೆ, ಮಂಡ್ಯ- 571401 ಇಲ್ಲಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗೆ ಮೊ.ಸಂ.: 9341993898 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತ್ರಿವೇಣಿ ಸಂಗಮ ಕೆ ಆರ್ ಪೇಟೆಯಲ್ಲಿ 4 ದಿನ ಮಹಾ ಕುಂಭ ಮೇಳ

ಚಾಲಕರೇ ಹುಷಾರ್…! ಮದ್ಯಾಹ್ನ ನಂತರ ಆಟೋ ರೋಡಿಗಿಳಿದ್ರೆ ಸೀಜ್..!

ದೈವಾಧೀನವಾದ ‘ದೇವರ ಮೊಸಳೆ’ …!

- Advertisement -

Latest Posts

Don't Miss