Saturday, July 27, 2024

Latest Posts

ಪ್ರಜ್ವಲ್ ವಿರುದ್ಧ ಕ್ರಮವಾಗುವವರೆಗೂ ಹೋರಾಟ ನಿರಂತರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪ್ರೊಟೆಸ್ಟ್

- Advertisement -

Hubli News: ಹುಬ್ಬಳ್ಳಿ: ಹಾಸನದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದೆ. ಪ್ರಕರಣವನ್ನು ಪ್ರಮುಖ ಅಸ್ತ್ರವಾಗಿ ಮಾಡಿಕೊಂಡಿರುವ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಮುಗಿಬಿದ್ದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸುವಂತೆ ಆಗ್ರಹಿಸಿ ಇಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಹು-ಧಾ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ನಡೆದ ಈ ವೊಂದು ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಬಿಸಿಲನ್ನು ಲೆಕ್ಕಿಸದೆ ಇಲ್ಲಿನ ಚೆನ್ನಮ್ಮ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದರು. ಈ ವೇಳೆ ದೇವೇಗೌಡರ ಕುಟುಂಬದ ಫ‌ಲಕಗಳನ್ನು ಪ್ರದರ್ಶಿಸಿ ಪ್ರಜ್ವಲ್ ರೇವಣ್ಣ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಕಾಮುಕ ಪ್ರಜ್ವಲ್‌ ರೇವಣ್ಣನ ಪೂರ್ವಾಪರ ಗೊತ್ತಿದ್ದೂ ಟಿಕೆಟ್‌ ನೀಡಿದ್ದಲ್ಲದೆ, ಪ್ರಚಾರ ಮಾಡುವ ಮೂಲಕ ಆತನ ಪರ ಮತ ಯಾಚಿಸಿರುವುದು ಬಿಜೆಪಿ ನಾಯಕರು ಮಹಿಳಾ ವಿರೋಧಿಗಳು ಎಂಬುದಕ್ಕೆ ಸಾಕ್ಷಿಯಾಗಿದೆ. ಅವರನ್ನು ತತ್‌ಕ್ಷಣವೇ ಬಂಧಿಸಬೇಕು ಹಾಗೂ ಸಂತ್ರಸ್ತ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿದರು.

ಇದೇ ವೇಳೆ ಕಾಂಗ್ರೆಸ್ ಮುಖಂಡೆ ಶಿವಲೀಲಾ ಕುಲಕರ್ಣಿ ಮಾತನಾಡಿ, ನೇಹಾ ಹತ್ಯೆ ಬಳಿಕ ಇದೀಗ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ರಾಜ್ಯಾದ್ಯಂತ ಹರದಾಡಿವೆ. ಆದರೆ ಬಿಜೆಪಿಯವರು ಕೇವಲ ನೇಹಾ ವಿಷಯವನ್ನು ಅಜೆಂಡವಾಗಿಟ್ಟುಕೊಂಡು ಲೋಕಸಭಾ ಚುನಾವಣೆಯಲ್ಲಿ ಮತ ಕೇಳುತ್ತಿದ್ದಾರೆ. ಪ್ರಜ್ವಲ್ ವಿರುದ್ಧ ಕ್ರಮವಾಗುವವರೆಗೆ ಹೋರಾಟ ನಿರಂತರವಾಗಿರುತ್ತದೆ ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಪ್ರದಾನ ಕಾರ್ಯದರ್ಶಿ ಕವಿತಾ ರೆಡ್ಡಿ, ರಾಜೇಶ್ವರಿ ಪಾಟೀಲ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೀಪಾ ಗೌರಿ, ಮುಖಂಡೆಯರಾದ ಚೇತನಾ ಲಿಂಗದಾಳ, ಬಾಳಮ್ಮ ಜಂಗಿನಮಠ, ದೇವಕಿ ಯೋಗಾನಂದ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ದೇಶದ ಜನ ಸ್ವಾವಲಂಬಿಯಾಗಲು ಮೋದಿಯವರು ಅನೇಕ ಸ್ಕೀಮ್ ಕೊಟ್ಟಿದ್ದಾರೆ: ಪ್ರಹ್ಲಾದ್ ಜೋಶಿ

ಪಾಕಿಸ್ತಾನ ಕೂಡ ಹೆದರುವಂತ ಮಹಾನ್ ವ್ಯಕ್ತಿ ಮೋದಿ: ಬಿ.ಎಸ್.ಯಡಿಯೂರಪ್ಪ

ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ: ಸಂತ್ರಸ್ತೆಯ ಅತ್ತೆಯಿಂದ ಸ್ಪೋಟಕ ಹೇಳಿಕೆ..

- Advertisement -

Latest Posts

Don't Miss