Hassan News: ಹಾಸನ: ನೇಣು ಬಿಗಿದುಕೊಂಡು ದ್ವಿತಿಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಉದಯಗಿರಿಯಲ್ಲಿರುವ ಮಾಸ್ಟರ್ ಪಿಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಚನ್ನರಾಯಪಟ್ಟಣ ತಾಲೂಕು, ಬೆಳಗುಲಿ ಗ್ರಾಮದ ಸುರೇಶ್, ಮಮತಾ ದಂಪತಿ ಏಕೈಕ ಪುತ್ರ ವಿಕಾಸ್(18) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನೆ ಕುರಿತು ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಹಾಸ್ಟೆಲ್ ವಾರ್ಡನ್ ಹಾಗೂ ಕಾಲೇಜಿನ ಆಡಳಿತ ಮಂಡಳಿಯ ಕಿರುಕುಳದಿಂದ ತಮ್ಮ ಮಗ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಹಾಸ್ಟೆಲ್ ವಾರ್ಡ್‌ನ್ ಹೇಮಂತ್ ಹಾಗೂ ಶಾಲಾ ಆಡಳಿತ ಮಂಡಳಿಯವರು ಆಗಮಿಸುವಂತೆ ಮೃತ ವಿಕಾಸ್ ಸಂಬಂಧಿಕರು ಪಟ್ಟು ಹಿಡಿದಿದ್ದು, ಅಲ್ಲಿಯವರೆಗೂ ಶವ ಮೇಲೆತ್ತಲು ಬಿಡುವುದಿಲ್ಲವೆಂದು ಆಕ್ರೋಶ ಹೊರಹಾಕಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಇನ್ನು ಇದೇ ವೇಳೆ ಕಾಲೇಜು ಪರವಾಗಿ ಮಾತನಾಡಲು ಬಂದ ಬಸ್ ಡ್ರೈವರ್‌ನನ್ನು ವಿದ್ಯಾರ್ಥಿ ಸಂಬಂಧಿಕರು ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಇದೇ ವೇಳೆ ಡ್ರೈವರ್‌ನನ್ನು ಪೊಲೀಸ್ ಜೀಪಿಗೆ ಹತ್ತಿಸಿ, ಪೊಲೀಸರು ಕಾಪಾಡಿದ್ದಾರೆ. ಆದರೂ ಬಿಡದ ಸಂಬಂಧಿಸಕರು, ಜೀಪ್‌ನಿಂದ ಡ್ರೈವರ್‌ನನ್ನು ಹೊರಗೆಳೆದು, ಹಲ್ಲೆಗೆ ಮುಂದಾಗಿದ್ದಾರೆ. ಪರಿಸ್ಥತಿ ನಿಭಾಯಿಸಲು ಪೊಲೀಸರು ಹರಸಾಹಸ ಮಾಡಬೇಕಾಯಿತು.
ರಾಜ್ಯದಲ್ಲಿ ಹುಕ್ಕಾಬಾರ್ ನಿಷೇಧ, ಸಿಗರೇಟ್ ನಿಷೇಧ ವಯೋಮಿತಿ ಹೆಚ್ಚಳ: ಸಚಿವ ಗುಂಡೂರಾವ್




