ಉಡುಪಿ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಬಂದಿದ್ದಕ್ಕೆ ಪ್ರಿನ್ಸಿಪಾಲ್ ಬೈದರೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೀಪ್ತಿ ಎಂಬ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಉಡುಲಿ ಜಿಲ್ಲೆಯ ಪೆರ್ಡೂರಿನ ಮನೆಯಲ್ಲಿ ಘಟನೆ ನಡೆದಿದೆ. ಹೆಬ್ರಿಯಲ್ಲಿರುವ ಎಸ್ಆರ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದಳು. ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಪಡೆದಿದ್ದಕ್ಕಾಗಿ ಪ್ರಿನ್ಸಿಪಾಲ್ ಫೈನ್ ಹಾಕುತ್ತೇನೆಂದು ಗದರಿಸಿದ್ದಾರೆ ಹಾಗಾಗಿ ಮನನೊಂದ ವಿದ್ಯಾರ್ಥಿ ದೀಪ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಹೇಳಿದ್ದಾರೆ.
ಪ್ರೀತಿಗಾಗಿ ತಾನು ಕೆಲಸ ಮಾಡುತ್ತಿದ್ದ ಎಟಿಎಂ ದೋಚಿದ ಸೆಕ್ಯುರಿಟಿ ಗಾರ್ಡ್
ಘಟನೆ ಕುರಿತು ಪ್ರತಿಕ್ರಿಯಿಸಿದ ವಿದ್ಯಾರ್ಥಿನಿ ತಂದೆ ಎಲ್ಲರೆದುರು ನನ್ನ ಮಗಳನ್ನು ಬೈದಿದ್ದಾರೆ ಅದಕ್ಕೆ ಮಗಳು ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿದ್ದಾರೆ ಮೆಂಡನ್ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ
ಪ್ರೀತಿಗಾಗಿ ತಾನು ಕೆಲಸ ಮಾಡುತ್ತಿದ್ದ ಎಟಿಎಂ ದೋಚಿದ ಸೆಕ್ಯುರಿಟಿ ಗಾರ್ಡ್