Thursday, March 20, 2025

Latest Posts

ವಿಷ ಮಿಶ್ರಿತ ನೀರು ಸೇವಿಸಿ 11 ಮಕ್ಕಳು ಅಸ್ವಸ್ಥ- ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಸುಮಲತಾ ಒತ್ತಾಯ

- Advertisement -

ಮಂಡ್ಯ: ಶಾಲೆಯಲ್ಲಿ ವಿಷ ಮಿಶ್ರಿತ ನೀರು ಸೇವಿಸಿ ಸುಮಾರು 11 ಮಂದಿ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದ್ದು, ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಸದೆ ಸುಮಲತಾ ಒತ್ತಾಯಿಸಿದ್ದಾರೆ.

ಮಂಡ್ಯ ತಾಲೂಕಿನ ಎ.ಹುಲ್ಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನೆಡೆದಿದ್ದು, ಇಂದು ಬೆಳಗ್ಗೆ ಉಪಹಾರ ಸೇವನೆ ಬಳಿಕ ನೀರು ಕುಡಿದ ಸುಮಾರು 11 ಮಂದಿ ವಿದ್ಯಾರ್ಥಿಗಳು ಏಕಾಏಕಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯ್ತು. ಈ ಪೈಕಿ ಇಬ್ಬರು ಮಕ್ಕಳು ತೀವ್ರ ಅಸ್ವಸ್ಥರಾಗಿದ್ದು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಶಾಲೆಯ ನೀರಿನ ಟ್ಯಾಂಕ್ ಗೆ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ವಿಷ ಬೆರೆಸಿದ್ದಾರೆ ಎನ್ನಲಾಗಿದ್ದು ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನು ಘಟನೆ ಕುರಿತು ಆಕ್ರೋಶ ವ್ಯಕ್ತಪಡಿಸಿರೋ ಸಂಸದೆ ಸುಮಲತಾ- ಪೊಲೀಸ್ ಇಲಾಖೆ ಈ ಕೂಡಲೇ ಮಕ್ಕಳ ಜೀವಕ್ಕೆ ಮುಳುವಾಗುವಂತಹ ಕೃತ್ಯಕ್ಕೆ ಕೈ ಹಾಕಿದವರನ್ನು ಪತ್ತೆ ಹಚ್ಚಬೇಕು. ಬಂಧಿತರಿಗೆ ಕಾನೂನಿನಡಿ ಶಿಸ್ತು ಕ್ರಮ ಜರುಗಿಸಬೇಕು.
ಮುಂದೆ ಎಲ್ಲೂ ಇಂತಹ ಹೇಯ ಕೃತ್ಯ ನಡೆಯದಂತೆ ಪೊಲೀಸ್ ಇಲಾಖೆ ಎಚ್ಚರವಹಿಸಬೇಕೆಂದು ಮನವಿ ಮಾಡುತ್ತೇನೆ ಅಂತ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಕಡೆ ವಾಲಿದ 107 ಶಾಸಕರು..!ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=VZ90UuSLItM
- Advertisement -

Latest Posts

Don't Miss