ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕದ ಕಾರಣ 2021-22 ನೇ ಸಾಲಿನ ಕಾಲೇಜಿನ ತರಗತಿಗಳು ತಡವಾಗಿ ಪ್ರಾರಂಭವಾಗಿದ್ದು ಅಂತಿಮ ಸೆಮಿಸ್ಟರ್ನ ಪದವಿ, ವೃತ್ತಿಪರ, ಸ್ನಾತಕೋತ್ತರ ಮತ್ತು ತಾಂತ್ರಿಕ ಹಾಗೂ ವೈಧ್ಯಕೀಯ ವಿದ್ಯಾರ್ಥಿಗಳ ಪರೀಕ್ಷೆಗಳು ಸೆಪ್ಟೆಂಬರ್-2022 ಮತ್ತು ಅಕ್ಟೋಬರ್ – 2022 ರ ಮಾಹೆಯಲ್ಲಿ ಇರುತ್ತವೆ.
ತತ್ಸಂಬಂಧ, ಸದರಿ ವಿದ್ಯಾರ್ಥಿಗಳ ಪರೀಕ್ಷೆಗಳು ಮುಗಿಯುವವರೆಗೂ ಸಂಸ್ಥೆಯ ಸೇವೆಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸುವ ಸಲುವಾಗಿ, 2021-22 ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸಿನೊಂದಿಗೆ ಅಂತಿಮ ವರ್ಷದ/ಸೆಮಿಸ್ಟರ್ನ ಪದವಿ, ವೃತ್ತಿಪರ, ಸ್ನಾತಕೋತ್ತರ ಮತ್ತು ತಾಂತ್ರಿಕ ಹಾಗೂ ವೈಧ್ಯಕೀಯ ವಿದ್ಯಾರ್ಥಿಗಳು ದಿನಾಂಕ 31.10.2022 ರವರೆಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.




