Dharwad News: ಧಾರವಾಡ : ಮಳೆಯಿಂದಾಗಿ ಸೋರುತ್ತಿರುವ ಧಾರವಾಡ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಳಾಂತರ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ಹೂಗುಚ್ಛ ನೀಡಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಕಟ್ಟಡ ಸ್ಥಳಾಂತರ ಕಾರ್ಯ ಸ್ವತಃ ಮುಂದೆ ನಿಂತು ಮಾಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ನಿಮ್ಮಿಂದ ನಮ್ಮ ಸಮಸ್ಯೆಗೆ ಪರಿಹಾರ ಸಿಕ್ಕಿದೆ ಮೆಡಂ ಧನ್ಯವಾದಗಳು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರನ್ನು ವಿದ್ಯಾರ್ಥಿಗಳು ಹಾಡಿ ಹೊಗಳಿದ್ದಾರೆ.
ಹಳೆಯ ಕಟ್ಟಡವಾಗಿದ್ದರಿಂದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಸಮಸ್ಯೆ ಆಗಿದ್ದರಿಂದ, ಕಟ್ಟಡಗಳನ್ನು ಧಾರವಾಡ ನಗರದ ಯುಪಿಎಸ್ ಹೈಸ್ಕೂಲ್ ಮತ್ತು ಡಯಟ್ ಆವರಣದಲ್ಲಿ ಕೊಠಡಿಗಳಿಗೆ ಸರಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನೀಯರ ಕ್ಲಾಸಗಳನ್ನು ಸ್ಥಳಾಂತರಿಸಲಾಗಿದೆ. ನಮ್ಮ ಸಮಸ್ಯೆಗೆ ಸ್ಪಂದಿಸಿ ಉತ್ತಮ ಕಟ್ಟಡ ನೀಡಿದ್ದಕ್ಕೆ ಧನ್ಯವಾದಗಳು ಎಂದು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

