- Advertisement -
Hubli news: ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ, ಅವಘಡ ಸಂಭವಿಸಿದ್ದು, ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಸ್ಥಿತಿ ಗಂಭೀರವಾಗಿದೆ.
ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಮಲಗಿದ್ದ ವೇಳೆ ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆಗಿದೆ. ಈ ವೇಳೆ 9 ಮಾಲಾಧಾರಿಗಳಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಮಾಲಾಧಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ಯಾಸ್ ಲಿಕ್ ಆಗಿ , ದೀಪ ಜೊತೆ ಬೆಂಕಿ ತಗುಲಿ ಬ್ಲಾಸ್ಟ್ ಆಗಿರುವ ಅನುಮಾನ ವ್ಯಕ್ತವಾಗಿದ್ದು, ಸ್ಥಳಕ್ಕೆ ಡಿಸಿಪಿ ನಂದಗಾವಿ ಭೇಟಿ ಪರಿಶೀಲನೆ ನಡೆಸಿದ್ದಾರೆ.
- Advertisement -