Film News:
ಸ್ಯಾಂಡಲ್ವುಡ್ನ ಬೇಡಿಕೆಯ ನಟ ಕಿಚ್ಚ ಸುದೀಪ್ ಅವರು ಕಾಂಗ್ರೆಸ್ಗೆ ಸೇರ್ಪಡೆ ಆಗುತ್ತಾರೆ ಎನ್ನುವ ವಿಚಾರ ಕೆಲ ದಿನಗಳಿಂದ ಚರ್ಚೆಯಲ್ಲಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಈ ವಿಚಾರವಾಗಿ ಸುದೀಪ್ಗೆ ಈ ಮೊದಲು ಪ್ರಶ್ನೆ ಮಾಡಲಾಗಿತ್ತು. ಆದರೆ, ಇದಕ್ಕೆ ಅವರು ಪ್ರತಿಕ್ರಿಯೆ ನೀಡಿಲ್ಲ. ಈ ಬೆನ್ನಲ್ಲೇ ಡಿಕೆಶಿ ಅವರನ್ನು ಭೇಟಿ ಮಾಡಿದ್ದಾರೆ.
ಡಿಕೆ ಶಿವಕುಮಾರ್, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮದ್ ನಲ್ಪಾಡ್ ಹಾಗೂ ಸುದೀಪ್ ಒಟ್ಟಿಗೆ ಇರುವ ಫೋಟೋ ವೈರಲ್ ಆಗಿದೆ. ಮೂವರು ಒಟ್ಟಾಗಿ ಭೋಜನ ಮಾಡಿದ್ದಾರೆ ಎನ್ನಲಾಗುತ್ತಿದೆ. ಚುನಾವಣಾ ಪ್ರಚಾರ ಸಭೆಗಳಿಗೆ ಬುರವಂತೆ ಸುದೀಪ್ಗೆ ಡಿಕೆಶಿ ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾಂಗ್ರೆಸ್ ಕಡೆಯಿಂದಾಗಲೀ ಸುದೀಪ್ ಕಡೆಯಿಂದಾಗಲಿ ಇನ್ನಷ್ಟೇ ಪ್ರತಿಕ್ರಿಯೆ ಸಿಗಬೇಕಿದೆ.
ಹೊಂದಿಸಿ ಬರೆಯಿರಿ’ ಟ್ರೇಲರ್ ಬಿಡುಗಡೆ – ಶುಭ ಹಾರೈಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್..!