ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಸುಧಾಕರ್, ಸಾರ್ವಜನಿಕರು ಸಹಕರಿಸಿದರೆ ಮಾತ್ರ ಕೊರೊನಾ ಕಂಟ್ರೋಲ್ ಮಾಡಲು ಸಾಧ್ಯ ಎಂದಿದ್ದಾರೆ.

ಇನ್ನು ಕೊರೊನಾ ಕೇಸ್‌ಗಳಲ್ಲಿ ರೋಗಿಗಳು ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬರುತ್ತಿದ್ದಾರೆ. ಹೀಗೆ ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬಂದರೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಯಾರಿಗಾದರೂ ಕೊರೊನಾ ಲಕ್ಷಣ ಕಾಣಿಸಿಕೊಂಡಿದ್ದಲ್ಲಿ ಬೇಗ ಬಂದು ವೈದ್ಯರ ಬಳಿ ತೋರಿಸಿ. ಅದರಲ್ಲೂ 60 ವರ್ಷ ಮೇಲ್ಪಟ್ಟವರಾಗಿದ್ದಲ್ಲಿ ಬೇಗ ಬಂದು ತೋರಿಸಿ ಎಂದು ಸುಧಾಕರ ಸೂಚಿಸಿದರು.
ರೋಗಲಕ್ಷಣಗಳಿರುವವರನ್ನು ಪತ್ತೆ ಹಚ್ಚಿ ತಪಾಸಣೆಗೆ ಒಳಪಡಿಸಲು ಅನುವಾಗುವಂತೆ ಬಿಬಿಎಂಪಿ ವತಿಯಿಂದ 800 ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳು ಮನೆಮನೆಗೆ ತೆರಳಿ ರೋಗ ಲಕ್ಷಣವಿರುವವರ ಸಮಿಕ್ಷೆ ನಡೆಸಲಿದ್ದಾರೆ.




