- Advertisement -
Mysuru: ಮೈಸೂರು: ಮೈಸೂರಿನ ಜೆ.ಎಸ್.ಎಸ್ ಮಹಿಳಾ ಕಾಲೇಜಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಷ್ ಭಾಗಿಯಾಗಿದ್ದು, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಮೈಸೂರಿನ ಜೆ.ಎಸ್.ಎಸ್. ಮಹಿಳಾ ಕಾಲೇಜಿನಲ್ಲಿ ನಡೆದ ಡಾ.ಸಿ.ಎನ್ ಮೃತ್ಯುಂಜಯಪ್ಪ ಆದರ್ಶ ವೈದ್ಯ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದೆ. ಯೂರೋಪಿನ ಖ್ಯಾತ ಏರ್ ಅಂಬುಲೆನ್ಸ್ ಕಂಪನಿಗಳ ಸಹಯೋಗದೊಂದಿಗೆ ತೀವ್ರ ಕಾಯಿಲೆಯಿಂದ ಬಳಲುತ್ತಿರುವ ಲಕ್ಷಾಂತರ ರೋಗಿಗಳನ್ನು ಖಂಡಾತರ ಪ್ರಯಾಣಕ್ಕೆ ಅಣಿಗೊಳಿಸಿ, ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿರುವ ಡಾ. ಶಾಲಿನಿ ನಾಲ್ವಾಡ್ ಅವರ ಅನುಪಮ ಸೇವೆಯನ್ನು ಗುರುತಿಸಿ ಸುತ್ತೂರು ಶ್ರೀಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮೈಸೂರು ಜಿಲ್ಲಾ ಮತ್ತು ನಗರ ಘಟಕ, ಕದಳಿ ಮಹಿಳಾ ವೇದಿಕೆ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮವು ಸಾಕಷ್ಟು ಮಹಿಳೆಯರಿಗೆ ಸ್ಫೂರ್ತಿ ಹಾಗೂ ಪ್ರೇರಣೆ ಕೊಡುವಂತಿತ್ತು. ಸಂಘಟನೆಗಳ ಎಲ್ಲರಿಗೂ ಮತ್ತು ಪ್ರಶಸ್ತಿ ಪುರಸ್ಕೃತರಿಗೂ ಶುಭ ಹಾರೈಕೆಗಳು ಎಂದು ಬರೆದಿದ್ದಾರೆ.
https://karnatakatv.net/political-news-ut-khadar-dk-shivakkumaf/
https://karnatakatv.net/dk-shivakumar-yathnal-talks/
https://karnatakatv.net/anna-bhagya-bjp-siddaramayya/
- Advertisement -