- Advertisement -
Political News: ಕೊಲ್ಕತ್ತಾದಲ್ಲಿ ನೈಟ್ ಶಿಫ್ಟ್‌ನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿ ಮೇಲೆ ಅತ್ಯಾಚಾರ ನಡೆದಿದ್ದು, ಈ ಘಟನೆಯನ್ನು ಮಾಜಿ ಸಂಸದೆ ಸುಮಲತಾ ಅಂಬರೀಶ್ ಖಂಡಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಸುಮಲತಾ, ಆಕ್ರೋಶ ಹೊರಹಾಕಿದ್ದಾರೆ.
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಕಾಲೇಜು ಕ್ಯಾಂಪಸ್‌ಗಳಲ್ಲಿನ ಗಂಭೀರ ಭದ್ರತಾ ವೈಫಲ್ಯಗಳನ್ನು ಎತ್ತಿ ತೋರಿಸುತ್ತದೆ.
ಶಿಕ್ಷಣಕ್ಕೆ ಅತ್ಯಂತ ಸುರಕ್ಷಿತ ಸ್ಥಳವಾಗಿರುವ ಸೆಮಿನಾರ್ ಹಾಲ್‌ನಲ್ಲಿ ನಡೆದ ಈ ಭಯಾನಕ ಕೃತ್ಯಕ್ಕೆ ಸಿಸಿಟಿವಿ, ಸುರಕ್ಷಿತ ವಿಶ್ರಾಂತಿ ಕೊಠಡಿಗಳು ಹಾಗೂ ಪ್ರವೇಶಕ್ಕೆ ಇರುವ ನಿರ್ಬಂಧದ ಕೊರತೆಯನ್ನು ಎತ್ತಿ ತೋರಿಸುತ್ತದೆ.
ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಆದ್ಯತೆ ನೀಡಬೇಕಾದ ಕಾಲೇಜು ಆಡಳಿತ ಮಂಡಳಿಯ ದಿವ್ಯ ನಿರ್ಲಕ್ಷ್ಯದಿಂದಾಗಿ ಉಜ್ವಲ ಭವಿಷ್ಯವನ್ನು ಹೊಂದಿದ್ದ ಯುವ ಪ್ರತಿಭಾವಂತ ವಿದ್ಯಾರ್ಥಿ ಜೀವವನ್ನೇ ಕಳೆದುಕೊಂಡಿದೆ.
https://youtu.be/nBnO49kmWgI
ಕಾಲೇಜು ಆವರಣದಲ್ಲಿ ನಡೆದಿರುವ ಈ ಗಂಭೀರ ಲೋಪದ ಬಗ್ಗೆ ಪಶ್ಚಿಮ ಬಂಗಾಳ ಸರ್ಕಾರ ಪ್ರತಿಕ್ರಿಯೆ ನೀಡಬೇಕು. ಭದ್ರತಾ ಲೋಪಕ್ಕೆ ಕಾರಣವೇನು? ಈ ಘಟನೆಯ ಸಂಬಂಧ ತ್ವರಿತ ಕ್ರಮ ಕೈಗೊಳ್ಳದೇ ಅಪರಾಧಿಯ ರಕ್ಷಣೆ ಮಾಡುತ್ತಿರುವುದೇಕೆ? ಈ ಪ್ರಕರಣದ ಗಂಭೀರತೆಯನ್ನರಿತು ಸಿಬಿಐಗೆ ವಹಿಸುವ ಕಲ್ಕತ್ತಾ ಹೈಕೋರ್ಟ್‌ನ ನಿರ್ಧಾರವು ಅಲ್ಲಿನ ರಾಜ್ಯ ಸರ್ಕಾರದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ.
ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದು, ಅಪರಾಧಿಗೆ ಕಠಿಣ ಶಿಕ್ಷೆ ಆಗಬೇಕೆಂದು ಸಿಬಿಐಗೆ ಒತ್ತಾಯಿಸುತ್ತೇನೆ. ಇಂತಹ ದುರಂತಗಳು ಮತ್ತೆ ಸಂಭವಿಸದಂತೆ ತಡೆಯಲು ಕಾಲೇಜು ಆವರಣದಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸಲು ಅಗತ್ಯ ಕ್ರಮವಹಿಸಬೇಕೆಂದು ಪಶ್ಚಿಮ ಬಂಗಾಳ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
https://youtu.be/yqGAgEKGmTg
- Advertisement -