Political News: ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ಹುಟ್ಟುಹಬ್ಬದ ಶುಭಾಶಯ ಕೋರಿದರು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುಮಲತಾ ಪೋಸ್ಟ್ ಮಾಡಿದ್ದು, ಈ ರೀತಿ ಬರೆದುಕೊಂಡಿದ್ದಾರೆ.
ನಮ್ಮೆಲ್ಲರ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ 73ನೇ ಜನ್ಮ ದಿನದ ಶುಭಾಶಯಗಳನ್ನು ಹೇಳಿದೆ. ಮತ್ತು ಇತ್ತೀಚೆಗಷ್ಟೇ ನಡೆದ G20 ಶೃಂಗಸಭೆಯ ಯಶಸ್ಸಿಗೆ ಅಭಿನಂದನೆಗಳನ್ನು ತಿಳಿಸಿದೆ.
ಈ ಸಂದರ್ಭದಲ್ಲಿ ನನ್ನ ಕ್ಷೇತ್ರ ಮಂಡ್ಯ ಮತ್ತು ಕರ್ನಾಟಕದ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅದಕ್ಕೆ ಸಂಬಂಧಿಸಿದ ಅನೇಕ ಸಲಹೆ ಸಹಕಾರವನ್ನು ಮಾನ್ಯ ಪ್ರಧಾನ ಮಂತ್ರಿಗಳು ನೀಡಿದರು.
ಸಾಕಷ್ಟು ಒತ್ತಡ ಮತ್ತು ಬಿಡುವಿಲ್ಲದ ಕೆಲಸಗಳ ನಡುವೆಯೂ ಕಡಿಮೆ ಸಮಯದಲ್ಲಿ ನನ್ನ ಭೇಟಿಗೆ ಅವಕಾಶ ನೀಡಿದ ಮಾನ್ಯ ಶ್ರೀ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನಿಮ್ಮ ಕಠಿಣ ಪರಿಶ್ರಮ ಮತ್ತು ದೇಶದ ಬಗೆಗಿನ ದೂರದೃಷ್ಟಿ ಯಾವಾಗಲೂ ನಮಗೆ ಸ್ಫೂರ್ತಿ ಹಾಗೂ ಮಾದರಿ ಎಂದು ಸುಮಲತಾ ಅಂಬರೀಷ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
Priyank Kharge : ಆರ್ಎಸ್ಎಸ್ ತತ್ತ್ವ ಪ್ರಜಾಪ್ರಭುತ್ವ ವಿರೋಧಿ : ಸಚಿವ ಪ್ರಿಯಾಂಕ್ ಖರ್ಗೆ
Mahesh Tenginakai : ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ನೀವು ಸರಿಮಾಡಿಕೊಳ್ಳಿ : ಶಾಸಕ ಟೆಂಗಿನಕಾಯಿ