ಬೆಂಗಳೂರು: ನಿನ್ನೆ ರೆಬೆಲ್ ಸ್ಟಾರ್ ಅಂಬರೀಷ್ ಹುಟ್ಟುಹಬ್ಬವಿದ್ದು, ಸುಮಲತಾ ಅಂಬರೀಷ್ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಇಂದು ಅಭಿಷೇಕ್ ಮತ್ತು ಅವಿವಾ ವಿವಾಹದ ಆಮಂತ್ರಣ ಪತ್ರವನ್ನು ಅಂಬಿ ಸಮಾಧಿಯ ಮೇಲಿರಿಸಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ನಟ, ಅಭಿಷೇಕ್ ಅಂಬರೀಷ್, ಅವರ ಭಾವಿ ಪತ್ನಿ ಅವಿವಾ ಸೇರಿ ಹಲವರು ಉಪಸ್ಥಿತರಿದ್ದರು.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ ಸುಮಲತಾ ಅಂಬರೀಷ್, ಡಾ.ಅಂಬರೀಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಅವರ ಸ್ಮಾರಕಕ್ಕೆ ಪೂಜೆ ಸಲ್ಲಿಸಿದೆವು. ಜೊತೆಗೆ ಪುತ್ರ ಅಭಿಷೇಕ್ ಅವರ ಮದುವೆ ಆಮಂತ್ರಣ ಪತ್ರಿಕೆಯನ್ನು ಅಂಬರೀಶ್ ಅವರಿಗೆ ಸಮಾಧಿ ಮೇಲಿಟ್ಟು ಅವರಿಗೆ ಅರ್ಪಿಸಲಾಯಿತು ಎಂದು ಬರೆದುಕೊಂಡಿದ್ದಾರೆ..
ಕಾಡಾನೆ ಸಮಸ್ಯೆ ನಿವಾರಣೆಗೆ ಅಗತ್ಯಕ್ರಮ, 15 ದಿನಗಳಲ್ಲಿ ರಸ್ತೆಗೆ ಶಾಶ್ವತ ಪರಿಹಾರ: ಶಾಸಕ ಸಿಮೆಂಟ್ ಮಂಜು ಭರವಸೆ
ಸಿಎಂ ಸಿದ್ದರಾಮಯ್ಯರನ್ನ ಮಗನ ಮದುವೆ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಸುಮಲತಾ ಅಂಬರೀಷ್..
ಹೊಸ ಸರ್ಕಾರ ಯಾವುದೇ ತನಿಖೆ ನಡೆಸಲಿ; ಎದುರಿಸಲು ನಾವು ಸಿದ್ದ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ