Thursday, June 19, 2025

Latest Posts

ಸುಮಲತಾ ಗೆ ಟಾಂಗ್ ಕೊಟ್ಟ ನಿಖಿಲ್ ಕುಮಾರಸ್ವಾಮಿ

- Advertisement -

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದರು ಚುನಾವಣೆಯಲ್ಲಿ ನಿಖಿಲ್ ಅವರನ್ನು ಸೋಲಿಸುವುದು ಮೂಲಕ ಸುಮಲತಾ ಅವರು ಜಯಗಳಿಸಿದ್ದರು.
2024 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬೆಂಗಳೂರಿನಲ್ಲಿ ಸ್ಪರ್ಧೆ ಮಾಡುತ್ತಾರೆಂದು ಹೇಳಿಕೆ ನೀಡಿದ್ದಾರೆ ಜೆಡಿಎಸ್ ರಾಜ್ಯಾಧ್ಯಕ್ಷ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಈ ರೀತಿಯಾಗಿ ಹೇಳಿಕೆ ನೀಡಿದ್ದಾರೆ.
ಸುಮಲತಾ ಅಂಬರೀಶ್ ಅವರು ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ ಎಂದು ಹೇಳಿಕೆ ನೀಡಿರುವ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಅವರು 2019ರಲ್ಲೇ ಮಂಡ್ಯ ಜಿಲ್ಲೆಯಲ್ಲಿ ಹೊಂದಾಣಿಕೆ ರಾಜಕೀಯ ಶುರುವಾಗಿದೆ . ಹಾಗಾಗಿ ಮುಂದಿನ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಕಣಕ್ಕೆ ಇಳಿಯುತ್ತಾರೆ ಎಂದು ಹೇಳಿಕೆ ನೀಡಿರುತ್ತಾರೆ .
ನಿಖಿಲ್ ಅವರು ಈ ರೀತಿ ಹೇಳಿಕೆಯಿಂದ ಮುಂದಿನ ಚುನಾವಣೆಯ ಬಗ್ಗೆ ಭವಿಷ್ಯ ನುಡಿದಂತಾಗಿದೆ .ನಿಖಿಲ್ ಕುಮಾರಸ್ವಾಮಿ ಹೇಳಿಕೆಯಂತೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಮಂಡ್ಯ ಕ್ಷೇತ್ರವನ್ನು ತೊರೆದು ಬೆಂಗಳೂರಿನಲ್ಲಿ ಕಣಕ್ಕಳಿಯುತ್ತಾರಾ ಅಂತ ಕಾದು ನೋಡಬೇಕಿದೆ .

ಪಾಲಿಟಿಕ್ಸ್ ಗೆ ಸುದೀಪ್ ಎಂಟ್ರಿ ಪಕ್ಕಾ ?

200 ಯುನೀಟ್ ಕರೆಂಟ್ ಗೆ ಶಾಕ್ ಕೊಟ್ಟ ಮುಖ್ಯಮಂತ್ರಿ

ಬಾಲಿವುಡ್ ಅಂಗಳದಲ್ಲಿ ಕಾಂತಾರ ಲೀಲಾ..!!

- Advertisement -

Latest Posts

Don't Miss