Sunday, April 13, 2025

Latest Posts

ಸುಮಲತಾ ಅಂಬರೀಷ್ ಬಿಜೆಪಿ ಸೇರಲು ಮುಹೂರ್ತ್ ಫಿಕ್ಸ್

- Advertisement -

Political news: ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ತಾನು ಕಾಂಗ್ರೆಸ್ ಸೇರುವುದಿಲ್ಲ, ಪಕ್ಷೇತರವಾಗಿ ಸ್ಪರ್ಧಿಸುವುದೂ ಇಲ್ಲ. ನಾನು ಮೋದಿಯವರ ಕೆಲಸವನ್ನು ಗೌರವಿಸುತ್ತೇನೆ. ನಾನು ಬಿಜೆಪಿಗೆ ಸೇರ್ಪಡೆಯಾಗಿ, ಪ್ರಧಾನಿ ಮೋದಿಯವರಿಗೆ ಬೆಂಬಲಿಸುತ್ತೇನೆ ಎಂದು ಹೇಳಿದ್ದರು.

ಇದೀಗ ಸುಮಲತಾ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದು, ಯಾವಾಗ ಬಿಜೆಪಿ ಸೇರಲಿದ್ದೇನೆ ಎಂದು ತಿಳಿಸಿದ್ದಾರೆ.  ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ.

ಈಗ ಬಿಜೆಪಿ ನಾಯಕರ ಸಮ್ಮುಖದಲ್ಲಿ 5 ಏಪ್ರಿಲ್ 2024ರ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ.
ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ಸುಮಲತಾ ಹೇಳಿದ್ದಾರೆ.

ಕಾಂಗ್ರೆಸ್ ಹಸ್ತ ತೋರಿಸುತ್ತದೆ. ಆದರೆ ಹಸ್ತ ತೋರಿಸದೇ ಕೆಲಸ ಮಾಡಿರುವುದು ಮೋದಿ ಸರ್ಕಾರ: ಗೋವಾ ಸಿಎಂ

ಡಾ.ಮಂಜುನಾಥ್ ಗೆದ್ದರೆ ಕೇಂದ್ರದಲ್ಲಿ ಅವರಿಗೆ ದೊಡ್ಡ ಹುದ್ದೆಯೇ ಸಿಗಲಿದೆ: ಬಿ.ಎಸ್.ಯಡಿಯೂರಪ್ಪ

ಯಡಿಯೂರಪ್ಪನವರ ಜೊತೆ ಸರ್ಕಾರ ಮಾಡಿದ್ದು ಸುವರ್ಣ ಯುಗ: ಹೆಚ್.ಡಿ.ಕುಮಾರಸ್ವಾಮಿ

- Advertisement -

Latest Posts

Don't Miss