Wednesday, October 29, 2025

Latest Posts

ಟ್ರಾಫಿಕ್ ಕಿರಿಕಿರಿಗೆ ರೋಸಿ ಹೋದ ಸುನೀಲ್ ಜೋಶಿ CM-DCMಗೆ ಪ್ರಶ್ನೆ!

- Advertisement -

ಐಟಿ, ಸಿಟಿ ಬೆಂಗಳೂರಲ್ಲಿ ಮೂಲಸೌಕರ್ಯಗಳ ಕೊರತೆ, ಟ್ರಾಫಿಕ್ ಮತ್ತು ರಸ್ತೆ ಗುಂಡಿಗಳಂತಹ ಸಮಸ್ಯೆಗಳು ದಿನದಿಂದ ದಿನಕ್ಕೆ ತೀವ್ರವಾಗುತ್ತಿವೆ ಎಂಬ ಆರೋಪವನ್ನು ಉದ್ಯಮಿಗಳು ಹಲವು ಬಾರಿ ಸರ್ಕಾರದ ವಿರುದ್ಧ ಮಾಡಿದ್ದರು. ಇತ್ತೀಚೆಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಚೀನಾದ ಉದ್ಯಮಿಯೊಬ್ಬರು ಬೆಂಗಳೂರಿನ ರಸ್ತೆ ಗುಂಡಿಗಳು ಹಾಗೂ ಕಸದ ಬಗ್ಗೆ ತಮ್ಮನ್ನು ಪ್ರಶ್ನಿಸಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಈ ವಿಚಾರ ಭಾರಿ ಚರ್ಚೆಗೆ ಕಾರಣವಾಗಿತ್ತು.

ಈ ಪೈಪೋಟಿಯಲ್ಲಿ ಈಗ ಬೆಂಗಳೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮಾರ್ಗದ ಸಂಚಾರ ದಟ್ಟಣೆ ಕುರಿತು ಮಾಜಿ ಕ್ರಿಕೆಟರ್ ಸುನೀಲ್ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಅವರು, ಹಗಲಿನ ಸಮಯದಲ್ಲೂ ಸರಕು ಸಾಗಣೆ ವಾಹನಗಳು ವಿಮಾನ ನಿಲ್ದಾಣದ ಮಾರ್ಗದಲ್ಲಿ ಸಂಚರಿಸುತ್ತಿವೆ ಎಂದು ಆರೋಪಿಸಿದ್ದಾರೆ. ರಾತ್ರಿ 10 ರಿಂದ ಬೆಳಿಗ್ಗೆ 6ರವರೆಗೆ ಮಾತ್ರ ಇವುಗಳಿಗೆ ಸಂಚಾರಕ್ಕೆ ಅನುಮತಿ ಇರುವಾಗ, ಹಗಲಿನ ವೇಳೆಯಲ್ಲಿಯೂ ಇಂತಹ ವಾಹನಗಳು ಹೇಗೆ ಸಂಚರಿಸುತ್ತಿವೆ ಎಂಬ ಪ್ರಶ್ನೆಯನ್ನು ಅವರು ಎತ್ತಿದ್ದಾರೆ.

ಫಾಸ್ಟ್ ಲೇನ್‌ಗಳಲ್ಲಿ ಸರಕು ಸಾಗಣೆ ವಾಹನಗಳು ನಿಲ್ಲುವ ಹಾಗೂ ಸಂಚರಿಸುವುದರಿಂದ ಪ್ರಯಾಣಿಕರು ಭಾರಿ ಟ್ರಾಫಿಕ್‌ನಲ್ಲಿ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಮಾನ ನಿಲ್ದಾಣಕ್ಕೆ ತೆರಳುವ ಅಥವಾ ಬರುವ ಸಾಮಾನ್ಯ ಜನರು ಕೂಡ ಈ ದಟ್ಟಣೆಯಿಂದ ತೀವ್ರ ಸಮಸ್ಯೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸುನೀಲ್ ಜೋಶಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss