Sunday, December 22, 2024

Latest Posts

Sunil Kumar : “ಸಾಕು ಮಾಡಿ ಸೋಗು” : ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ಗರಂ

- Advertisement -

Banglore News : ಬೆಂಗಳೂರಿನಲ್ಲಿ ಇಂದು ಅಂದರೆ ಜುಲೈ 28 ರಂದು ಉಡುಪಿ ಕಾಲೇಜಿನಲ್ಲಿ ವೀಡಿಯೋ ಲೀಕ್  ವಿಚಾರವಾಗಿ ಟ್ವೀಟ್ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಬಂಧಿಸಲಾಗಿತ್ತು. ಜೊತೆಗೆ ಉಡುಪಿಯ ವಿಚಾರವನ್ನು ಬಯಲಿಗೆಲೆಯಲು ಟ್ವೀಟ್ ಮಾಡಿದ ರಶ್ಮಿ ಅವರನ್ನು ಕೂಡಾ ಬೆದರಿಸಲಾಗಿತ್ತು. ಇದೇ ವಿಚಾರವಾಗಿ ಶಾಸಕ ಮಾಜಿ ಸಚಿವ ಸುನೀಲ್ ಕುಮಾರ್ ವಿರೋಧ ವ್ಯಕ್ತ ಪಡಿಸಿದ್ದಾರೆ.

ಸಂತ್ರಸ್ತೆಯರ ಪರವಾಗಿ ಧ್ವನಿ ಎತ್ತುವುದು ತಪ್ಪು ಎಂದಾದರೆ ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರ ಹಕ್ಕು, ಮಾನ- ಸಮ್ಮಾನದ ಬಗ್ಗೆ ಗೌರವ ಇಲ್ಲವೆಂದು ಅರ್ಥವೇ ? ನಿಮ್ಮ ಮನೆಯ ಹೆಣ್ಣು ಮಕ್ಕಳಿಗೂ ಅಪಮಾನವಾದರೆ ಸಹಿಸುತ್ತೀರಾ ಎಂದು ಶಕುಂತಲಾ ಪ್ರಶ್ನಿಸಿದ್ದರಲ್ಲಿ ತಪ್ಪೇನಿದೆ ?ಸಿದ್ದರಾಮಯ್ಯನವರೇ ಇನ್ನಾದರೂ ನಿಮ್ಮ ಬೂಟಾಟಿಕೆ ನಿಲ್ಲಿಸಿ ಎಂಬುವುದಾಗಿ ಹೇಳಿದ್ದಾರೆ.

ಹಿಟ್ಲರ್, ಮುಸಲೋನಿಯವರನ್ನೇ ಮೀರಿಸುವ ಸರ್ವಾಧಿಕಾರಿ ನೀವು. ಅಭಿವ್ಯಕ್ತಿ ಸ್ವಾತಂತ್ರ್ಯ, ಸ್ತ್ರೀ ಸಮಾನತೆ, ಸಂವಿಧಾನದ ಆಶಯ ಎಂಬ ಶಬ್ದಗಳನ್ನು ಬಳಸುವುದಕ್ಕೆ ನೀವು ಅನರ್ಹ. ಸಾಕು ಮಾಡಿ ಸೋಗು ಎಂದು ಕಿಡಿಕಾರಿದ್ದಾರೆ ಸುನೀಲ್ ಕುಮಾರ್.

ದಮ್ಮು, ತಾಕತ್ತಿನ ಬಗ್ಗೆ ವೀರಾವೇಶದಿಂದ ಮಾತನಾಡುವ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪೊಲೀಸರಿಗೆ ಉಡುಪಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವುದಕ್ಕೆ ತಾಕತ್ತಿಲ್ಲ.ವಿಡಿಯೋ ಪ್ರಕರಣದ ಬಗ್ಗೆ ಟ್ವೀಟ್ ಮಾಡಿ ರಾಜ್ಯದ ಗಮನ ಸೆಳೆದ ರಶ್ಮಿಯವರ ಮನೆಗೆ ರಾತ್ರೋರಾತ್ರಿ ತೆರಳಿ ವಿಚಾರಣಾ ಹಿಂಸೆ ಮಾಡುವ ಪೊಲೀಸರಿಗೆ ಸಹ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಮಾಡಿದ ಮುಸ್ಲಿಂ ವಿದ್ಯಾರ್ಥಿನಿಯರ ಮನೆಗೆ ತೆರಳಿ ವಿಚಾರಣೆ ನಡೆಸುವ ತಾಕತ್ತಿಲ್ಲವೇ ?ಟ್ವೀಟ್ ಮಾಡಿದ್ದು ದೊಡ್ಡ ಅಪರಾಧವೊ, ವಿಡಿಯೊ ಮಾಡಿದ್ದು ಅಪರಾಧವೊ? ಎಂದು ಪ್ರಶ್ನೆ ಮಾಡಿದ್ದಾರೆ.

 

G Parameshwar : ಸಚಿವ ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ : 10 ಯುವಮೋರ್ಚಾ ಕಾರ್ಯಕರ್ತರ ಬಂಧನ

Pinakini river story- ತಾಯಿ ಹೇಳಿದ ಬುದ್ದಿ ಮಾತಿಗೆ ಮನನೊಂದ ಮಗಳು ಆತ್ಮಹತ್ಯೆ

Siddaramaiah : ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್​ ನೋಟೀಸ್..?!

- Advertisement -

Latest Posts

Don't Miss