“ಕಾಂಗ್ರೆಸ್ ಸುಳ್ಳು ಹೇಳುತ್ತಿದೆ”:ಸುನೀಲ್ ಕುಮಾರ್

Udupi NewsL:

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿತ್ತು ಈ ವಿಚಾರವಾಗಿ ಪ್ರತಿಕ್ರಿಯಿಸಿದ ಇಂಧನ ಸಚಿವ ಸುನೀಲ್ ಕುಮಾರ್ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಸುಳ್ಳು ಹೇಳುತ್ತಿದೆ.ರಾಜ್ಯದ ಮತದಾರರನ್ನು ತನ್ನತ್ತ ಸೆಳೆಯಲು ಭರ್ಜರಿ ಆಫರ್ ನೀಡಿದೆ ಕಾಂಗ್ರೆಸ್. ಜನರಿಗೆ ಮೋಸ ಮಾಡುತ್ತಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಎಲ್ಲಾ ಎಸ್ಕಾಂಗಳು ದಿವಾಳಿಯಾಗಿದ್ದವು. ಬೊಮ್ಮಾಯಿ ಸಿಎಂ ಆದ ನಂತರ 9 ಸಾವಿರ ಕೋಟಿ ರೂ. ನೀಡಿದ್ದೇವೆ. ಎಸ್ಕಾಂ ದಿವಾಳಿ ಮಾಡಿದ ಸಿದ್ದರಾಮಯ್ಯ ಸುಳ್ಳು ಭರವಸೆ ನೀಡ್ತಿದ್ದಾರೆ. ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್ ನೀಡುವುದಾಗಿ ಹೇಳುತ್ತಿದ್ದಾರೆ. ಇದರಲ್ಲಿ ಇಂಧನ ಇಲಾಖೆಯನ್ನು ಖಾಸಗೀಕರಣ ಮಾಡುವ ಹುನ್ನಾರ ಅಡಗಿದೆ. ಈಗಾಗಲೇ ಸಬ್ಸಿಡಿ ರೂಪದಲ್ಲಿ ಸರ್ಕಾರ 16,000 ಕೋಟಿ ರೂ. ನೀಡ್ತಿದೆ. ನಮ್ಮ ಸರ್ಕಾರ ಈ ಆರ್ಥಿಕ ನಷ್ಟವನ್ನು ಸರಿದೂಗಿಸುವ ಕೆಲಸ ಮಾಡಿದೆ ಎಂದು ಉಡುಪಿಯಲ್ಲಿ ಇಂಧನ ಇಲಾಖೆ ಸಚಿವ ಸುನೀಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ.

ಸಿಎಂ ಮನೆ ಮುಂದೆ ಪಂಚಮಸಾಲಿಗಳ ಪ್ರತಿಭಟನೆ..!

ದಿನೇಶ್ ಗುಂಡೂರಾವ್ ಮಾತಿಗೆ ತಿರುಗೇಟು ನೀಡಿದ ಬೊಮ್ಮಾಯಿ

ಗುಜರಾತ್ ನಲ್ಲಿ ಸ್ಯಾಂಟ್ರೋ ರವಿ ಬಂಧನ..! ಕರ್ನಾಟಕ ಪೊಲೀಸರ ಬೇಟೆ ಹೇಗಿತ್ತು..?!

About The Author